ಬಿಜೆಪಿ ಕಾರ್ಯಕರ್ತನ ಸಾವಿನ ಮಧ್ಯೆ ರಾಜಕೀಯ- ಸಂತೋಷ್ ಮನೆ ಸಮೀಪದಲ್ಲೇ ಸಿಎಂ ಬಿರಿಯಾನಿ ಪಾರ್ಟಿ

ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕರ್ತ ನಡುರಸ್ತೆಯಲ್ಲೇ ಕೊಲೆಯಾಗಿದ್ರೆ, ಗುರುವಾರ ತಡರಾತ್ರಿ ಅದೇ ಏರಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ರಜಾಕ್ ಸಾಹೇಬರ ಬಿರಿಯಾನಿ ತಿಂದು ಪಾರ್ಟಿಯಲ್ಲಿ ಮುಳುಗಿದ್ರು.

ಹೌದು, ನಿನ್ನೆ ತಡರಾತ್ರಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯುಟಿ ಖಾದರ್ ಮನೆಯಲ್ಲಿ ಭೋಜನ ಕೂಟ ಆಯೋಜಿಸಲಾಗಿತ್ತು. ಈ ಭೋಜನ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ, ಶಾಸಜ ಜಮೀರ್ ಅಹಮ್ಮದ್ ಹಾಗೂ ಮುಸ್ಲಿಂ ಮುಖಂಡರು ಪಾಲ್ಗೊಂಡಿದ್ದರು. ಶಾಸಕ ಜಮೀರ್ ಅಹಮ್ಮದ್ ಇತ್ತೀಚೆಗೆ ಕಾಂಗ್ರೆಸ್ ಸೇರಲು ಸಕಲ ತಯಾರಿಗಳನ್ನ ಮಾಡ್ಕೊಂಡಿರೋ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಕೆಲ ನಾಯಕರಿಗೆ ಅಸಮಾಧಾನ ಮೂಡಿತ್ತು.

ಅದೇ ರೀತಿ ಈ ಹಿಂದೆ ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲ್ಪಟ್ಟಿದ್ದ ನಾಯಕರುಗಳು ಜಮೀರ್ ರ ಪಕ್ಷಾಂತರಕ್ಕೆ ತೀವೃ ವಿರೋಧ ವ್ಯಕ್ತಪಡಿಸಿದ್ದರು. ಆದ್ರೆ, ಅದ್ಯಾವುದಕ್ಕೂ ಡೋಂಟ್ ಕ್ಯಾರ್ ಅಂದಿರೋ ಸಿಎಂ ಬಿಜೆಪಿ ಕಾರ್ಯಕರ್ತನ ಸಾವಿನ ಬೆನ್ನಲ್ಲೇ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ಇದೀಗ ಭೋಜನ ಕೂಟಕ್ಕೆ ಸೈ ಎಂದಿದ್ದಾರೆ. ಇದೆಲ್ಲವನ್ನ ನೋಡಿದ್ರೆ ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಜಮೀರ್ ಕಾಂಗ್ರೆಸ್ ಪ್ರವೇಶ ಶತಸಿದ್ಧ ಎನ್ನುವುದರಲ್ಲಿ ಎರಡು ಮಾತಿಲ್ಲ.

ಜೆ.ಸಿ. ನಗರದ ನಿವಾಸಿಯಾಗಿರೋ 28 ವರ್ಷದ ಸಂತೋಷ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಬಿಜೆಪಿ ಪರ ಓಡಾಡಿಕೊಂಡಿದ್ದರು. ಬುಧವಾರ ರಾತ್ರಿ ಸುಮಾರು 7:30 ರಲ್ಲಿ ಹೊತ್ತಿಗೆ ಸಂತೋಷ್ ತಮ್ಮ ಮನೆ ಬಳಿ ಇದ್ದ ಬೇಕರಿಯಲ್ಲಿ ಟೀ ಕುಡಿಯುತ್ತಾ ನಿಂತಿದ್ದರು. ಈ ವೇಳೆ ಅದೇ ಏರಿಯಾದ ವಾಸೀಮ್, ಉಮರ್, ಫಿಲಿಪ್ಸ್ ಮತ್ತು ಇರ್ಫಾನ್ ಎಂಬವರು ಕೂಡ ಅಲ್ಲೇ ಟೀ ಕುಡಿಯುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದು ವಾಸೀಮ್ ಎಂಬಾತ ತನ್ನ ಬಳಿ ಇದ್ದ ಚಾಕುವಿನಿಂದ ಸಂತೋಷ್ ತೊಡೆಗೆ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತ ಸ್ರಾವದಿಂದ ಸಂತೋಷ್ ಕೊನೆಯುಸಿರೆಳೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಸದ್ಯ ಪ್ರಕರಣ ಸಂಬಂಧ ವಸೀಂ, ಫಿಲಿಪ್ಸ್ ಎಂಬ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಠಾಣೆಯೆದುರು ಪ್ರತಿಭಟನೆ ಸಹ ನಡೆಸಿದ್ದರು. ಸಂತೋಷ್ ಹತ್ಯೆ ರಾಜಕೀಯ ಪ್ರೇರಿತ ಕೊಲೆ ಅಂತ ಆರೋಪಿಸಿದ್ದು, ವಸೀಂ ಸ್ಥಳೀಯ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರ ಮಗ, ಅವನಿಗೂ ಬಿಜೆಪಿಗೂ ಆಗುತ್ತಿರಲಿಲ್ಲ. ಹಾಗಾಗಿ ಬಿಜೆಪಿಯ ಪರ ಓಡಾಡುತ್ತಿದ್ದ ಸಂತೋಷ್‍ನನ್ನ ಕೊಲೆಗೈಯ್ಯಲಾಗಿದೆ ಎಂದು ಆರೋಪಿಸಿದ್ದರು.

Comments

Leave a Reply

Your email address will not be published. Required fields are marked *