ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಂದು ಹಾಸನದ (Hassan) ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.

ಮಂಗಳವಾರ (ಅ.14) ಡಿಸಿಎಂ ಡಿಕೆ ಶಿವಕುಮಾರ್ ದರ್ಶನ ಪಡೆದ ಬೆನ್ನಲ್ಲೇ ಬುಧವಾರ (ಅ.15) ಬೆಳಗ್ಗೆ 12ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ ದರ್ಶನ ಪಡೆದರು.ಇದನ್ನೂ ಓದಿ: ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ವಾಗತಿಸಿದರು. ಸಿಎಂ ಬರುತ್ತಿದ್ದಂತೆ ಜಾನಪದ ಕಲಾತಂಡಗಳು ಜಗ್ಗಲಿಗೆ ಬಾರಿಸಿ, ಕೊಂಬು ಕಂಸಾಳೆ ಊದಿ ಸ್ವಾಗತ ಮಾಡಿಕೊಂಡರು. ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿ ದರ್ಶನಕ್ಕೆ ಕರೆದೊಯ್ಯಿತು.

ಕಳೆದ ಎರಡು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ದೇವಿ ದರ್ಶನ ಪಡೆಯುತ್ತಿದ್ದು, ಈ ಮೂಲಕ ಮೂರನೇ ಬಾರೀ ದೇವಿ ದರ್ಶನ ಪಡೆದುಕೊಂಡಿದ್ದಾರೆ. ದೇವಿ ದರ್ಶನ ಪಡೆದು ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.

ಇದೇ ವೇಳೆ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಕೆ.ಎಸ್.ಲತಾಕುಮಾರಿ, ದಕ್ಷಿಣ ವಯಲ ಐಜಿಪಿ, ಬೋರಲಿಂಗಯ್ಯ ಎಸ್ಪಿ ಮಹಮದ್ ಸುಜೀತಾ ಉಪಸ್ಥಿತರಿದ್ದರು. ಸಿಎಂ ಆಗಮನದ ಹಿನ್ನೆಲೆ ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.ಇದನ್ನೂ ಓದಿ: ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ – ದೇಶದ ಹೆಸರಲ್ಲಿ ಪೂಜೆ