9,000 ಕೋಟಿ ವೆಚ್ಚದ 867 ಕಾಮಗಾರಿಗಳಿಗೆ ಇಂದು ಸಿಎಂ ಚಾಲನೆ

– 150 ಕೋಟಿ ವೆಚ್ಚದ ಕ್ರೀಡಾಂಗಣ ಶಂಕಿಸ್ಥಾಪನೆ

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದು ತುಮಕೂರು (Tumakuru) ಗ್ರಾಮಾಂತರಕ್ಕೆ ನೀಡಲಿದ್ದು, 9 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ಇದನ್ನೂ ಓದಿ: ರೆಫ್ರಿ ವಿವಾದಿತ ತೀರ್ಪಿನಿಂದ ಫುಟ್ಬಾಲ್ ಅಭಿಮಾನಿಗಳ ನಡುವೆ ಘರ್ಷಣೆ – 100ಕ್ಕೂ ಹೆಚ್ಚು ಮಂದಿ ಸಾವು

ಇದೇ ವೇಳೆ ತುಮಕೂರು ಗ್ರಾಮಾಂತರದ ಸೋರೆಕುಂಟೆ ಬಳಿಯ ಪಿ ಗೊಲ್ಲಹಳ್ಳಿಯಲ್ಲಿ 41 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ 150 ಕೋಟಿ ರೂ. ವೆಚ್ಚದ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ (International Cricket Stadium) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ 1.5 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೃಷ್ಣಭೈರೇಗೌಡ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಯತ್ನಾಳ್‌ಗೆ ಶಾಕ್ – ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಶೋಕಾಸ್ ನೋಟಿಸ್