ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರಿಗೆ ರಾಜಕೀಯ ಕಾರ್ಯದರ್ಶಿ ಮತ್ತು ಸಂಸದೀಯ ಕಾರ್ಯದರ್ಶಿ ಸ್ಥಾನಗಳನ್ನು ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಾಗಿದ್ದಾರೆ.
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ರಾಮಪ್ಪ ಲಮಾಣಿ, ಎಸ್.ಅಂಗಾರ, ಎಂ.ಪಿ.ಕುಮಾರಸ್ವಾಮಿ, ರಾಮದಾಸ್, ಪೂರ್ಣಿಮಾ ಶ್ರೀನಿವಾಸ್, ರೂಪಾಲಿ ನಾಯಕ್, ಸತೀಶ್ ರೆಡ್ಡಿ, ಕಳಕಪ್ಪ ಬಂಡಿ, ಶಿವನಗೌಡ ನಾಯಕ್, ದತ್ತಾತ್ರೇಯ ಪಾಟೀಲ್ ರೇವೂರ ಸೇರಿದಂತೆ 12 ಬಿಜೆಪಿ ಶಾಸಕರಿಗೆ ರಾಜಕೀಯ ಕಾರ್ಯದರ್ಶಿ ಮತ್ತು ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಲು ಸಿಎಂ ಯಡಿಯೂರಪ್ಪ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲು ಸಿಎಂ ಯಡಿಯೂರಪ್ಪ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಎಸ್.ಆರ್ ವಿಶ್ವನಾಥ್ ಮುಖ್ಯಮಂತ್ರಿಗಳ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಸಮ್ಮಿಶ್ರ ಸರ್ಕಾರ ಪತನಕ್ಕೂ ಮುನ್ನ ಅತೃಪ್ತ ಶಾಸಕರನ್ನು ರೆಸಾರ್ಟ್ ನಲ್ಲಿಟ್ಟು ಪರಿಸ್ಥಿತಿ ನಿಭಾಯಿಸಿದ್ದರು.
ಹೀಗಾಗಿ ಒಟ್ಟು 6 ಶಾಸಕರನ್ನು ರಾಜಕೀಯ ಕಾರ್ಯದರ್ಶಿ, 6 ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೆ ನಿರ್ಧಾರ ಮಾಡಿದ್ದಾರೆ. ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಪ್ರಕಟ ಮಾಡುವ ಸಾಧ್ಯತೆ ಇದೆ. ಈ ಮೂಲಕ ಬಂಡಾಯ ಶಮನಕ್ಕೆ ಸಿಎಂ ಯಡಿಯೂರಪ್ಪ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.

Leave a Reply