ಬುರ್ಖಾ ಧರಿಸಿದ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಕಾಲೇಜು – ಭುಗಿಲೆದ್ದ ಆಕ್ರೋಶ

ಮುಂಬೈ: ನಗರದ ಕಾಲೇಜೊಂದರಲ್ಲಿ (College) ವಿದ್ಯಾರ್ಥಿನಿಯರು ಬುರ್ಖಾ (Burqa) ಧರಿಸಿ ಬಂದಿದ್ದಕ್ಕೆ ಅವರನ್ನು ಕ್ಯಾಂಪಸ್‌ಗೆ ಪ್ರವೇಶಿಸಲು ನಿರ್ಬಂಧಿಸಲಾಗಿದ್ದು, ಬಳಿಕ ವಿಚಾರ ತಿಳಿದ ಪೋಷಕರು ವಿದ್ಯಾರ್ಥಿಗಳೊಂದಿಗೆ ಸೇರಿ ಕಾಲೇಜು ಬಳಿ ಭಾರೀ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಘಟನೆ ಚೆಂಬೂರಿನ ಕಾಲೇಜಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ತಡೆದಿದ್ದು, ಬುರ್ಖಾಗಳನ್ನು ತೆಗೆದುಹಾಕಿದರೆ ಮಾತ್ರವೇ ಒಳಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸಿದ ಬಳಿಕ ತರಗತಿಗೆ ಹಾಜರಾಗುವ ಮೊದಲು ವಿಶ್ರಾಂತಿ ಕೊಠಡಿಯಲ್ಲಿ ಬುರ್ಖಾ ತೆಗೆಯುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ ತರಗತಿಯಲ್ಲಿ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು, ನಂತರ ಉದ್ವಿಗ್ನತೆ ಶಮನವಾಗಿದೆ. ಇದನ್ನೂ ಓದಿ: ಕೇರಳದ ಕೊಚ್ಚಿಯಲ್ಲಿ ಕರ್ನಾಟಕ ಪೊಲೀಸರ ಅರೆಸ್ಟ್‌ – ಲಂಚಕ್ಕೆ ಬೇಡಿಕೆಯಿಟ್ಟು ಲಾಕ್‌ ಆದ ಬೆಂಗಳೂರು ಪೊಲೀಸರು

ಚೆಂಬೂರಿನ ಎನ್‌ಜಿ ಆಚಾರ್ಯ ಹಾಗೂ ಡಿಕೆ ಮರಾಠಿ ಕಾಲೇಜಿನ ಹೊಸ ಸಮವಸ್ತ್ರ ನಿಯಮದ ಪ್ರಕಾರ ವಿದ್ಯಾರ್ಥಿಗಳು ಬುರ್ಖಾ, ಹಿಜಬ್, ಸ್ಟಿಕ್ಕರ್‌ಗಳನ್ನು ಧರಿಸುವಂತಿಲ್ಲ. ಈ ಹಿನ್ನೆಲೆ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದಕ್ಕೆ ಅವರನ್ನು ಕಾಲೆಜು ಗೇಟ್‌ನಲ್ಲೇ ತಡೆದು ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸರ್ವೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]