ಹಾವೇರಿ: ಯುವಕನೊಬ್ಬ ಯುವತಿಯರ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಇಬ್ಬರು ಯುವತಿಯರು ಆತನಿಗೆ ಚಳಿ ಬಿಡಿಸಿದ ಘಟನೆ ಹಾವೇರಿ ನಗರದ ಬಸ್ ನಿಲ್ದಾಣದ ಬಳಿ ಎರಡು ದಿನಗಳ ಹಿಂದೆ ನಡೆದಿದೆ.
ಬಸ್ ನಿಲ್ದಾಣದ ಬಳಿ ಕಲಂದರ್ ಎಂಬಾತ ಹಾವೇರಿ ತಾಲೂಕಿನ ಇಬ್ಬರು ಯುವತಿಯರ ಜೊತೆ ಅನುಚಿತವಾಗಿ ವರ್ತಿಸಿದ್ದ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಯುವತಿಯರು ಯುವಕನ ಕೊರಳ ಪಟ್ಟಿ ಹಿಡಿದು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ನಂತರ ಸ್ಥಳೀಯರು ಕಾಲೇಜು ಯುವತಿಯರು ಮತ್ತು ಯುವಕನನ್ನು ಸಮಾಧಾನಪಡಿಸಿ ಕಳಿಸಿದ್ದಾರೆ. ಎರಡು ದಿನಗಳ ಹಿಂದೆ ಮಧ್ಯಾಹ್ನ ಈ ಘಟನೆ ನಡೆದಿದೆ. ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
https://www.youtube.com/watch?v=nSTIAwI8uO8







Leave a Reply