ಪರೀಕ್ಷೆ ಬಳಿಕ ಹಾಸ್ಟೆಲ್‍ನಲ್ಲಿ ಪಾರ್ಟಿ-ಆಳ್ವಾಸ್ ಕಾಲೇಜು ಸಿಬ್ಬಂದಿಯಿಂದ ವಿದ್ಯಾರ್ಥಿಗಳಿಗೆ ಥಳಿತ

ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಮತ್ತೊಂದು ಎಡವಟ್ಟು ಮರುಕಳಿಸಿದೆ. ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಸಿಬ್ಬಂದಿ ಸೇರಿ ಯದ್ವಾತದ್ವಾ ಹೊಡೆದಿದ್ದಾರೆ.

ಶನಿವಾರ ರಾತ್ರಿ ಕಾಲೇಜಿನ ಪುಷ್ಪಗಿರಿ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು, ಸಿಬ್ಬಂದಿ ಕೃತ್ಯ ವಿರೋಧಿಸಿ ವಿದ್ಯಾರ್ಥಿಗಳು ಇಂದು ಬೆಳಗ್ಗಿನಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ.

ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಸೇರಿ ಹಾಸ್ಟೆಲ್ ನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದರು. ಆದರೆ ಇದಕ್ಕೆ ವಾರ್ಡನ್ ಮತ್ತು ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಮತ್ತೊಬ್ಬ ವಿದ್ಯಾರ್ಥಿಯ ಮಾಹಿತಿ ಪ್ರಕಾರ, ಊಟದ ವಿಚಾರದಲ್ಲಿ ವಿದ್ಯಾರ್ಥಿಗಳು ಸಿಬ್ಬಂದಿಯನ್ನು ಪ್ರಶ್ನೆ ಮಾಡಿದ್ದರಂತೆ. ಇದೇ ನೆಪ ಇಟ್ಟುಕೊಂಡು ವಾರ್ಡನ್ ಮತ್ತು ಇತರೇ ಕಾಲೇಜು ಸಿಬ್ಬಂದಿ ಸೇರಿ ರಾತ್ರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

20ಕ್ಕಿಂತಲೂ ಹೆಚ್ವು ವಿದ್ಯಾರ್ಥಿಗಳ ಮೇಲೆ ತೀವ್ರವಾಗಿ ಥಳಿಸಿದ್ದಾರೆ. ಥಳಿಸುವ ವಿಡಿಯೋವನ್ನು ಸ್ವತಃ ವಿದ್ಯಾರ್ಥಿಗಳೇ ತಮ್ಮ ಮೊಬೈಲಿನಲ್ಲಿ ಚಿತ್ರೀಕರಿಸಿ, ಮಾಧ್ಯಮಕ್ಕೆ ನೀಡಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿಗಳ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಥಳಿಸಿದ ವಿಚಾರದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಕಾಲೇಜು ಕ್ಯಾಂಪಸ್ ನಲ್ಲಿ ಜಟಾಪಟಿ ನಡೀತಿದೆ.

Comments

Leave a Reply

Your email address will not be published. Required fields are marked *