ಗುಡ್‌ ನ್ಯೂಸ್‌; ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ

ನವದೆಹಲಿ: ವಾಣಿಜ್ಯ ವಲಯದವರಿಗೆ ಬೆಳ್ಳಂಬೆಳಗ್ಗೆ ಗುಡ್‌ನ್ಯೂಸ್‌ ಸಿಕ್ಕಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ (Commercial LPG) ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.

ತೈಲ ಮಾರುಕಟ್ಟೆಗಳಿಂದ ಬೆಲೆ ಪರಿಷ್ಕರಣೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಇಂದಿನಿಂದಲೇ (ಜು.1) ಜಾರಿಗೆ ಬರಲಿದೆ. ಇದನ್ನೂ ಓದಿ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಇನ್ನೋರ್ವ ಆರೋಪಿ ಅರೆಸ್ಟ್

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಹೊಸ ಚಿಲ್ಲರೆ ಬೆಲೆ ಈಗ 1,665 ರೂ. ಗಳಾಗಿದ್ದು, ಈಗಾಗಲೇ ಹೆಚ್ಚುತ್ತಿರುವ ಇನ್‌ಪುಟ್ ವೆಚ್ಚಗಳೊಂದಿಗೆ ಹೋರಾಡುತ್ತಿರುವ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಅಡುಗೆ ತಯಾರಿಕರು ನಿಟ್ಟುಸಿರು ಬಿಡುವಂತಾಗಿದೆ. 14.2 ಕೆಜಿ ದೇಶೀಯ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಏಪ್ರಿಲ್‌ನಲ್ಲಿ 41 ರೂ.ಗಳಷ್ಟು ಬೆಲೆ ಕಡಿಮೆ ಮಾಡಲಾಯಿತು. ನಂತರ ಮೇ ತಿಂಗಳಲ್ಲಿ 14.50 ರೂ. ಮತ್ತು ಜೂನ್‌ನಲ್ಲಿ 24 ರೂ.ಗಳಷ್ಟು ಇಳಿಕೆ ಮಾಡಲಾಗಿತ್ತು. ಇದನ್ನೂ ಓದಿ: ಶೀಘ್ರದಲ್ಲೇ ಡಿಕೆಶಿ ಸಿಎಂ ಆಗ್ತಾರೆ – ಇಕ್ಬಾಲ್ ಹುಸೇನ್ ಬಾಂಬ್