ಪ್ರವಾದಿ ಕುರಿತ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿದ ಅಮೆರಿಕ

ವಾಷಿಂಗ್ಟನ್‌: ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಕುರಿತು ಇಬ್ಬರು ಬಿಜೆಪಿ ನಾಯಕರು ನೀಡಿದ ಆಕ್ಷೇಪಾರ್ಹ ಹೇಳಿಕೆ ಖಂಡನೀಯ ಎಂದು ಅಮೆರಿಕ ಪ್ರತಿಕ್ರಿಯಿಸಿದೆ.

ಬಿಜೆಪಿ ನಾಯಕರ ವಿವಾದಿತ ಹೇಳಿಕೆಯಿಂದ ಭಾರತ ಹಾಗೂ ಮುಸ್ಲಿಂ ರಾಷ್ಟ್ರಗಳಲ್ಲಿ ಕೋಲಾಹಲ ಎದ್ದಿದೆ. ಇದಕ್ಕೆ ಕಾರಣವಾದ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಖಂಡನೀಯವಾಗಿದೆ ಎಂದು ಅಮೆರಿಕ ಹೇಳಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್- ಬೆಂಗಳೂರು ಸೇರಿ 21 ಕಡೆ ದಾಳಿ

ಇಬ್ಬರು ಬಿಜೆಪಿ ನಾಯಕರು ಮಾಡಿದ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ನಾವು ಖಂಡಿಸುತ್ತೇವೆ. ಪಕ್ಷವು ತನ್ನ ಮುಖಂಡರ ಹೇಳಿಕೆಗಳನ್ನು ಸಾರ್ವಜನಿಕವಾಗಿ ಖಂಡಿಸುವುದನ್ನು ನೋಡಿ ನಮಗೆ ಸಂತೋಷಗಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ತಿಳಿಸಿದ್ದಾರೆ.

ನಾವು ಧಾರ್ಮಿಕ ಅಥವಾ ನಂಬಿಕೆಯ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ಕಾಳಜಿಯ ಕುರಿತು ಉನ್ನತ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ಚರ್ಚೆ ನಡೆಸಿದ್ದೇವೆ. ಮಾನವ ಹಕ್ಕುಗಳ ಗೌರವವನ್ನು ಉತ್ತೇಜಿಸಲು ನಾವು ಭಾರತವನ್ನು ಪ್ರೋತ್ಸಾಹಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮೋದಿಗೆ ನಾಯಿ ಸಾವು ಬರುತ್ತೆ ಎಂದಿದ್ದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ಬಂಧನ

ಬಿಜೆಪಿ ವಕ್ತಾರರಾಗಿದ್ದ ನೂಪುರ್‌ ಶರ್ಮಾ ಈಚೆಗೆ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಶರ್ಮಾ ಹೇಳಿಕೆಗೆ ಇಸ್ಲಾಮಿಕ್‌ ರಾಷ್ಟ್ರಗಳು ತೀವ್ರ ಖಂಡನೆ ವ್ಯಕ್ತಪಡಿಸಿದವು. ಅಷ್ಟೇ ಅಲ್ಲದೆ ಭಾರತದಲ್ಲೂ ಕೂಡ ಮುಸ್ಲಿಮರು ವ್ಯಾಪಕ ಪ್ರತಿಭಟನೆ ನಡೆಸಿದರು.

ಬಿಜೆಪಿ ಆಡಳಿತದ ಭಾರತದಲ್ಲಿ ಧಾರ್ಮಿಕ ವಿಚಾರವಾಗಿ ಒಂದಲ್ಲ ಒಂದು ಸಂಘರ್ಷ ಉಂಟಾಗುತ್ತಿದೆ. ಹಿಜಬ್‌ ವಿವಾದದ ಸಂದರ್ಭದಲ್ಲೂ ಭಾರತದ ನಡೆಗೆ ಅಮೆರಿಕ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಟೀಕಿಸಿತ್ತು.

Live Tv

Comments

Leave a Reply

Your email address will not be published. Required fields are marked *