ಕಾಂಗ್ರೆಸ್ ಮಾಜಿ ಶಾಸಕನ ಉಚ್ಛಾಟನೆಗೆ ಆಗ್ರಹಿಸಿ ದಿನೇಶ್ ಗುಂಡೂರಾವ್ ಗೆ ಪತ್ರ!

ಬಾಗಲಕೋಟೆ: ಹುನಗುಂದ ಕಾಂಗ್ರೆಸ್ ಮಾಜಿ ಶಾಸಕರ ಉಚ್ಛಾಟನೆಗೆ ಆಗ್ರಹಿಸಿ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ಮನವಿ ಸಲ್ಲಿಸಿದ್ದಾರೆ.

ಬಾಗಲಕೋಟೆ ಕಾಂಗ್ರೆಸ್ ಸಮಿತಿಯಿಂದ ಈ ಮನವಿ ಪತ್ರ ನೀಡಲಾಗಿದ್ದು, ಪತ್ರದಲ್ಲಿ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಈ ಕೂಡಲೇ ಉಚ್ಛಾಟಿಸಬೇಕೆಂದು ಆಗ್ರಹಿಸಲಾಗಿದೆ. ಇದನ್ನೂ ಓದಿ:  ನಿನ್ನೆ ಕೋಳಿವಾಡ, ಇಂದು ನಾಯಕರ ವಿರುದ್ಧವೇ ಸಿಡಿದ ಕಾಶಪ್ಪನವರ್!

ನನ್ನ ಸೋಲಿಗೆ ಮಾಜಿ ಸಚಿವರಾದ ಎಸ್.ಆರ್. ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಕಾರಣ ಎಂದು ಕಾಶಪ್ಪನವರ್ ಪದೇ ಪದೇ ವೇದಿಕೆಯಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ. ಅಲ್ಲದೇ ಪಕ್ಷದ ವರ್ಚಸ್ಸಿಗೆ ಧಕ್ಕೆ, ಮುಜುಗರ ತರುವ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಶಾಸಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. 

ಕಾಶಪ್ಪನವರ ಹೇಳಿಕೆಯಿಂದ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುತ್ತಣ್ಣ ಬೆನ್ನೂರ ನೇತೃತ್ವದಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರೋ ಗುಂಡೂರಾವ್ ಮನೆಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

Comments

Leave a Reply

Your email address will not be published. Required fields are marked *