ಮೋದಿ ಸೋಲಿಸಲು ಕಾಂಗ್ರೆಸ್‌ನವರು ಪಾಕಿಸ್ತಾನದ ಬೆಂಬಲ ಕೇಳಿದ್ರು – ಪ್ರಹ್ಲಾದ್ ಜೋಶಿ

ಬೆಂಗಳೂರು: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಸೋಲಿಸಲು ಕಾಂಗ್ರೆಸ್‌ನವರು ಪಾಕಿಸ್ತಾನದ ಬೆಂಬಲ ಕೇಳಿದ್ರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಮೋದಿ ಅವರನ್ನು ಸೋಲಿಸಲು ಪಾಕಿಸ್ತಾನದ ಬೆಂಬಲ ಕೇಳಿದ್ದರು. ಈ ತರಹದ ವ್ಯಕ್ತಿಗಳು ಭಯೋತ್ಪಾದನೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ!

Congress

ಕಾಂಗ್ರೆಸ್ ಇಡೀ ದೇಶದಲ್ಲಿ ಭಯೋತ್ಪಾದನೆ ವಿಷಯದಲ್ಲಿ ಪ್ರೆಸ್‌ಮೀಟ್ ಮಾಡುತ್ತಿದ್ದು, ಇದೊಂದು ಹಾಸ್ಯಾಸ್ಪದ ಸಂಗತಿಯಾಗಿದೆ. ಕಾಂಗ್ರೆಸ್‌ನಿಂದಲೇ ಭಯೋತ್ಪಾದನೆ ಪ್ರಾರಂಭವಾಯಿತು. ಆಗ ದೇಶದ ಮೂಲೆ ಮೂಲೆಯಲ್ಲೂ ಭಯೋತ್ಪಾದನಾ ಚಟುವಟಿಕೆಗಳು ನಡೆದಿವೆ. ಈಗ ದೇಶದ ಯಾವುದೇ ಭಾಗದಲ್ಲೂ ಭಯೋತ್ಪಾದನೆ ನಡೆಯುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ತನ್ನ ವೋಟ್‌ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಹೊಳೆಗೆ ಕಾರು ಉರುಳಿದ ಪ್ರಕರಣಕ್ಕೆ ಟ್ವಿಸ್ಟ್- ಆಕ್ಸಿಡೆಂಟ್ ಆಗೋ 4 ನಿಮಿಷ ಮೊದಲೇ ಕರೆ ಮಾಡಿದ್ದ ಯುವಕರು..!

ಕಾಂಗ್ರೆಸ್ ನೀತಿಯಿಂದಲೇ ಭಯೋತ್ಪಾದನೆ ಪ್ರಾರಂಭವಾಯಿತು. ಒಂದು ರೀತಿಯಲ್ಲಿ ಕಾಂಗ್ರೆಸ್ ಪ್ರಾಯೋಜಿತ ಭಯೋತ್ಪಾದನೆಗಳೇ ನಡೆದಿವೆ. ತುಷ್ಟೀಕರಣದ ರಾಜಕಾರಣದ ಪರಾಕಾಷ್ಟೇ ಎಷ್ಟರ ಮಟ್ಟಿಗೆ ಇತ್ತೆಂದರೆ, ಬಾಟ್ಲಾಹೌಸ್ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರು ಸತ್ತಾಗ ಸೋನಿಯಾಗಾಂಧಿ ಅವರು ಕಣ್ಣೀರು ಹಾಕಿದ್ದರೆಂದು ಪಕ್ಷವೇ ಘೋಷಣೆ ಮಾಡಿದೆ. ತುಕಡೆ-ತುಕಡೆ ಗ್ಯಾಂಗ್ ಅಫ್ಜಲ್ ಗುರು ಪರ ಘೋಷಣೆ ಹಾಕಿದಾಗ ಅವರ ಪರ ನಿಂತವರು ರಾಹುಲ್ ಗಾಂಧಿ. ಈ ರೀತಿ ಹಲವು ಉದಾಹರಣೆಗಳಿವೆ ಅಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆಶಿ ಅವರೇ ಸಿದ್ದರಾಮಯ್ಯರ ಟಾರ್ಗೆಟ್: ಸಿದ್ದರಾಮೋತ್ಸವ ಮಾಡ್ತಿರೋದಕ್ಕೆ ನಮಗೆ ಹೊಟ್ಟೆಕಿಚ್ಚಿಲ್ಲ. ಕಾಂಗ್ರೆಸ್ ಪಕ್ಷದವರಿಗೇ ಹೊಟ್ಟೆಕಿಚ್ಚಿದೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್‌ಗೆ ಬಂದು ಮೊದಲು ಖರ್ಗೆಯವರನ್ನ ಮುಳುಗಿಸಿದರು. ನಂತರ ಪರಮೇಶ್ವರ್‌ರನ್ನ ಮುಳುಗಿಸಿದರು. ಈಗ ಸಿದ್ದರಾಮಯ್ಯ ಅವರ ಮುಂದಿನ ಟಾರ್ಗೆಟ್ ಡಿ.ಕೆ.ಶಿವಕುಮಾರ್. ಹಾಗಾಗಿ ಸಿದ್ದರಾಮೋತ್ಸವ ಮಾಡಿದಷ್ಟೂ ನಮಗೇ ಲಾಭ. ಅದಕ್ಕೆ ನಾನು ಶುಭ ಹಾರೈಸುತ್ತೇನೆ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *