ಅಯೋಧ್ಯೆಗೆ ಭೇಟಿ ಕೊಟ್ಟ ಬಳಿಕ ನನ್ನನ್ನು ಟಾರ್ಗೆಟ್‌ ಮಾಡಲಾಗಿದೆ: ʼಕೈʼ ವಿರುದ್ಧ ರಾಧಿಕಾ ಕಿಡಿ

ರಾಂಚಿ: ಅಯೋಧ್ಯೆಗೆ (Ayodhya  Ram Manir) ಭೇಟಿ ಕೊಟ್ಟು ರಾಮಲಲ್ಲಾನ ದರ್ಶನ ಪಡೆದ ಬಳಿಕ ಪಕ್ಷದಲ್ಲಿ ನನ್ನನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಕಾಂಗ್ರೆಸ್‌ ಮಾಜಿ ವಕ್ತಾರೆ ರಾಧಿಕಾ ಖೇರಾ (Radhika Khera) ಗಂಭೀರ ಆರೋಪ ಮಾಡಿದ್ದಾರೆ.

ಶನಿವಾರವಷ್ಟೇ ಕಾಂಗ್ರೆಸ್‌ ತೊರೆದಿರುವ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾನು ಅಯೋಧ್ಯೆಗೆ ಹೋಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಾಗಲಿಲ್ಲ. ಆದರೆ ಅಲ್ಲಿಗೆ ಭೇಟಿ ನೀಡಿದ್ದಕ್ಕಾಗಿ ಇಷ್ಟೊಂದು ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ, ಎನ್‌ಡಿಎ ನಾಯಕರಿಂದ ಹೆಣ್ಣುಮಕ್ಕಳ ರಕ್ಷಣೆ ಮಾಡುವ ಪರಿಸ್ಥಿತಿ ಬಂದಿದೆ: ಬಿ.ವಿ ಶ್ರೀನಿವಾಸ್

ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ. ಅಯೋಧ್ಯೆಗೆ ಭೇಟಿ ಕೊಟ್ಟ ಬಳಿಕ ನನಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿದೆ. ಕಾಂಗ್ರೆಸ್ ನನ್ನನ್ನು ಮಹಿಳಾ ವಿರೋಧಿ ಎಂದು ಆರೋಪಿಸಿದೆ. ಈ ಬಗ್ಗೆ ನಾನು ಧ್ವನಿಯೆತ್ತಿದರೂ ನನಗೆ ನ್ಯಾಯ ಸಿಗಲಿಲ್ಲ. ಇಂದು ನಾನು ನನ್ನ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ರಾಧಿಕಾ ತಿಳಿಸಿದ್ದಾರೆ.

ಛತ್ತೀಸ್‌ಗಢ ಘಟಕದಲ್ಲಿ ಅಗೌರವದ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ಪದೇ ಪದೇ ಎಚ್ಚರಿಕೆ ನೀಡಿದರೂ ಯಾರೂ ನನಗೆ ಸಹಾಯ ಮಾಡಲಿಲ್ಲ. ಇದೇ ವೇಳೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಮೂರು ವರ್ಷಗಳಿಂದ ಕಾಯುತ್ತಿದ್ದೇನೆ. ಆದರೆ ಅವರು ಯಾರೂ ನನ್ನನ್ನು ಭೇಟಿ ಮಾಡಲಿಲ್ಲ. ನನ್ನನ್ನು ಯಾವಾಗಲೂ ಒಂದು ಕಚೇರಿಯಿಂದ ಇನ್ನೊಂದಕ್ಕೆ ಕಳುಹಿಸಲಾಗುತ್ತದೆ ಎಂದು ಆರೋಪಿಸಿದರು.  

ಇದೇ ವೇಳೆ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಲೇವಡಿ ಮಾಡಿದ ಖೇರಾ, ರಾಹುಲ್ ಗಾಂಧಿ (Rahul Gandhi) ಅವರು ರ‍್ಯಾಲಿಯಲ್ಲಿ ಯಾರನ್ನೂ ಭೇಟಿ ಮಾಡಲಿಲ್ಲ. ಜನರತ್ತ ಕೇವಲ 5 ನಿಮಿಷಗಳ ಕಾಲ ಕೈ ಬೀಸಿದರು ಹಿಂದುರಿಗಿದ್ದಾರೆ. ಅವರ ನ್ಯಾಯ ಯಾತ್ರೆ ಹೆಸರಿಗಾಗಿ ಮತ್ತು ಅವರು ಕೇವಲ ಟ್ರಾವೆಲ್ ವ್ಲಾಗರ್ ಆಗಲು ಬಯಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.