ಚಾಮರಾಜನಗರದಲ್ಲಿ ಶಿಷ್ಯನ ವಿರುದ್ಧ ಬಿಜೆಪಿ ಗುರು ಅಸ್ತ್ರ

ಚಾಮರಾಜನಗರ: ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಜಿಲ್ಲೆಯಲ್ಲಿ ಶಿಷ್ಯನ ಹ್ಯಾಟ್ರಿಕ್ ಜಯಕ್ಕೆ ಬ್ರೇಕ್ ಹಾಕಲು ಗುರುವನ್ನು ಅಖಾಡಕ್ಕೆ ತರಲು ಬಿಜೆಪಿ ಪ್ರಯತ್ನಿಸುತ್ತಿದೆ ಎನ್ನಲಾಗುತ್ತಿದೆ.

ಬಿಜೆಪಿ ಹೈಕಮಾಂಡ್ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ವಿ.ಶ್ರೀನಿವಾಸ್‍ಪ್ರಸಾದ್ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದೆ. ಈ ಹಿಂದೆ 5 ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಶ್ರೀನಿವಾಸ್‍ಪ್ರಸಾದ್ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ನಿಲ್ಲಿಸಲು ಯತ್ನಿಸುತ್ತಿದೆ ಎಂದು ತಿಳಿದು ಬಂದಿದೆ.

ಇತ್ತ ಈಗಾಗಲೇ ಸತತ ಎರಡು ಬಾರಿ ಕಾಂಗ್ರೆಸ್‍ನಿಂದ ಗೆಲುವು ಸಾಧಿರುವ ಆರ್.ಧೃವನಾರಯಣ್ ಹ್ಯಾಟ್ರಿಕ್ ಗೆಲುವಿನತ್ತ ಮುನ್ನುಗ್ಗಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಹೀಗಾಗಿ ಶಿಷ್ಯ ಆರ್.ಧೃವನಾರಯಣ್ ಅವರನ್ನು ಸೋಲಿಸಿ ಕೈ ಕೋಟೆಯಾದ ಚಾಮರಾಜನಗರ ಜಿಲ್ಲೆಯಲ್ಲಿ ಕಮಲ ಬಾವುಟ ಹಾರಿಸಲು ಗುರು ವಿ.ಶ್ರೀನಿವಾಸ್‍ಪ್ರಸಾದ್ ಅವರನ್ನು ಅಸ್ತ್ರವನ್ನಾಗಿ ಬಿಜೆಪಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ಹಿನ್ನೆಲೆಯಲ್ಲಿ ಶ್ರೀನಿವಾಸ್‍ ಪ್ರಸಾದ್‍ರನ್ನು ಚುನಾವಣೆಗೆ ನಿಂತುಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ಒತ್ತಾಯ ಮಾಡುತ್ತಿದೆ. ಈಗಾಗಲೇ ದೋಸ್ತಿ ಸರ್ಕಾರದ ಸಂಭಾವ್ಯ ಪಟ್ಟಿ ಸಿದ್ಧಗೊಂಡಿದ್ದು, ಅದರಲ್ಲಿ ಚಾಮರಾಜನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಧ್ರುವ ನಾರಾಯಣ್ ಅಭ್ಯರ್ಥಿಯಾಗಿ ಹೆಸರು ಸೂಚಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *