ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಹೆಚ್ಚು ಆಯಸ್ಸು ಇಲ್ಲ ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಕೆ.ಎನ್ ರಾಜಣ್ಣ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಬಗ್ಗೆ ನಾನು ಹೆಚ್ಚಾಗಿ ಹೇಳೋದಿಲ್ಲ. ನನ್ನದೇ ಆದ ಅಭಿಪ್ರಾಯಗಳಿವೆ. ಮೈತ್ರಿ ಸರ್ಕಾರದಲ್ಲಿ ಇಬ್ಬರೂ (ಕಾಂಗ್ರೆಸ್ ಮತ್ತು ಜೆಡಿಎಸ್) ಕೂಡ ಮೈತ್ರಿ ಧರ್ಮ ಪಾಲಿಸಿಕೊಂಡು ಹೋದರೆ ಎರಡೂ ಪಕ್ಷಗಳಿಗೂ ಗೌರವವಿದೆ ಎಂದು ಹೇಳಿದ್ದಾರೆ.
ಇಲಾಖೆಯೊಂದಕ್ಕೆ ಮಂತ್ರಿಯಿದ್ದರು. ಆದ್ರೆ ಇವರು ಅವರನ್ನು ಕೇಳದೆ ಇವರೇ ಇನ್ನೊಬ್ಬ ಅಧಿಕಾರಿಯನ್ನು ನೇಮಕ ಮಾಡುತ್ತಾರೆ ಎಂದರೆ ಮೈತ್ರಿ ಧರ್ಮವನ್ನು ಎಲ್ಲಿ ಪಾಲಿಸುತ್ತಿದ್ದಾರೆ. ಆದ್ದರಿಂದ ಇದಕ್ಕೆ ಹೆಚ್ಚು ಆಯಸ್ಸು ಇಲ್ಲ ಎಂಬುದು ನನ್ನ ಭಾವನೆ ಅಂತ ರಾಜಣ್ಣ ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Leave a Reply