ಮಾ.9ರ ಕರ್ನಾಟಕ ಬಂದ್‌ ವಾಪಸ್ ಪಡೆದ ಕಾಂಗ್ರೆಸ್

ಬೆಂಗಳೂರು: ಪಿಯುಸಿ ಪರೀಕ್ಷೆ (PUC Exam) ಇರುವ ಕಾರಣ ಮಾರ್ಚ್ 9 ರಂದು ಬೆಳಗ್ಗೆ 9 ಗಂಟೆಗೆ ಕರೆದಿದ್ದ ಕರ್ನಾಟಕ ಬಂದ್ (Karnataka Band) ವಾಪಸ್ ಪಡೆದಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ (Ramalinga Reddy) ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಭ್ರಷ್ಟಾಚಾರ ವಿರೋಧಿಸಿ ನಾಳೆ ಕಾಂಗ್ರೆಸ್‍ನಿಂದ 2 ಗಂಟೆಗಳ ಕಾಲ ಬಂದ್ ಮಾಡಲು ನಿರ್ಧರಿಸಿದ್ದೆವು. ಆದರೆ ನಾಳೆ ಪಿಯುಸಿ ಪರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಶಾಲಾ, ಕಾಲೇಜು ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ವಾಪಸ್ ಪಡೆದಿದ್ದೇವೆ ಎಂದು ಹೇಳಿದರು.

ಭಾನುವಾರ  ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಮಾತನಾಡಿ, ಬಿಜೆಪಿ (BJP) ಭ್ರಷ್ಟಾಚಾರ (Corruption) ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದರು. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲಾಡಳಿತ ಸಿದ್ಧತೆ

ಅಷ್ಟೇ ಅಲ್ಲದೇ ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು (Law) ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಕರ್ನಾಟಕ ವಿಧಾನಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ- 2018ರ ಚುನಾವಣೆಯಲ್ಲಿ ಗೆದ್ದ ಮಹಿಳೆಯರು ಯಾರು?, ಸೋತವರೆಷ್ಟು?

Comments

Leave a Reply

Your email address will not be published. Required fields are marked *