51ರ ಮಹಿಳೆ ಮೇಲೆ ಅತ್ಯಾಚಾರ ಆರೋಪ- ಕೇರಳ ಕಾಂಗ್ರೆಸ್ ಶಾಸಕ ಅರೆಸ್ಟ್

ತಿರುವನಂತಪುರಂ: 51 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಕೇರಳದ ಕಾಂಗ್ರೆಸ್ ಶಾಸಕ ಎಮ್ ವಿನ್ಸೆಂಟ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರದ ಆರೋಪ ಮಾಡಿರುವ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ವಿನ್ಸೆಂಟ್ ಅವರನ್ನ ತಿರುವನಂತಪುರಂನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳೆಯ ದೂರಿನನ್ವಯ ಶಾಸಕರ ವಿರುದ್ಧ ಅತ್ಯಾಚಾರ ಹಾಗು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯು ನೆಯ್ಯಟಿಂಕಾರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಕೆಯ ಹೇಳಿಕೆ ದಾಖಲಿಸಿಕೊಂಡ ನಂತರ ಶಾಸಕರ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕೊಲ್ಲಂನ ನಗರ ಪೊಲೀಸ್ ಆಯುಕ್ತರಾದ ಅಜೀತಾ ಬೇಗಂ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ದಾಖಲಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶಾಸಕರು ಸತತವಾಗಿ ನನ್ನ ಹೆಂಡತಿಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ಸಂತ್ರಸ್ತ ಮಹಿಳೆಯ ಪತಿ ಆರೋಪ ಮಾಡಿದ್ದಾರೆ.

ಆದರೆ ಶಾಸಕ ವಿನ್ಸೆಂಟ್ ಈ ಎಲ್ಲಾ ಆರೋಪಗಳು ನಿರಾಧಾರ ಎಂದು ಹೇಳಿದ್ದು, ತನಿಖೆ ಎದುರಿಸುತ್ತೇನೆ ಎಂದಿದ್ದಾರೆ. ನನ್ನ ವಿರುದ್ಧ ಪಿತೂರಿ ಮಾಡಿ ಈ ಆರೋಪ ಮಾಡಲಾಗಿದೆ. ಆ ಮಹಿಳೆ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಂತೆ ನನಗೆ ಹಲವು ಬಾರಿ ಕರೆ ಮಾಡಿದ್ರು. ಆಕೆಯ ದೂರುಗಳನ್ನ ಸ್ಥಳೀಯ ಪೊಲೀಸರಿಗೆ ವರ್ಗಯಿಸಿದ್ದೆ ಎಂದು ವಿನ್ಸೆಂಟ್ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *