ಕಾಂಗ್ರೆಸ್ ಮುಖಂಡ ನಾಪತ್ತೆ- ಅಪಹರಣ ಶಂಕೆ

ದಾವಣಗೆರೆ: ಕಾಂಗ್ರೆಸ್ ಮುಖಂಡ ನಾಪತ್ತೆಯಾಗಿದ್ದು, ಹುಡಿಕಿ ಕೊಡುವಂತೆ ಸಂಬಂಧಿಕರು ಪೊಲೀಸರಿಗೆ ದೂರು ನೀಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ನಡೆದಿದೆ.

ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ (40) ನಾಪತ್ತೆಯಾದ ಸುದ್ದಿ ತಿಳಿದು ಕುಟುಂಬದ ಸದಸ್ಯರು ಆತಂಕದಲ್ಲಿದ್ದಾರೆ. ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿರುವ ಜೈನುಲ್ಲಾ ಖಾನ್, ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಉದ್ದೇಶ ಪೂರ್ವಕವಾಗಿ ಅಪಹರಿಸಿರುವ ಶಂಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಫೋಟೋ ಚೆನ್ನಾಗಿ ಬಂದಿದ್ಯಾ ಅಂತ ಚೆಕ್ ಮಾಡ್ತಿದ್ದಾನೆ ರಾಯನ್: ಸುಧಾರಾಣಿ

ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ವೃತ್ತಿಯಲ್ಲಿ ಬೆಸ್ಕಾಂ ಗುತ್ತಿಗೆದಾರನಾಗಿದ್ದು, ಇದೇ ವಿಚಾರಕ್ಕೆ ಅಪಹರಿಸಿದ್ದಾರೆಂಬ ಶಂಕೆ ವ್ಯಕ್ತವಾಗುತ್ತಿದೆ. ಕಾಣೆಯಾಗಿರುವ ಜೈನುಲ್ಲಾ ಖಾನ್ ರನ್ನು ಹುಡುಕಿಕೊಡುವಂತೆ ಸಂಬಂಧಿಕರು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸಹ ಪ್ರಕರಣ ದಾಖಲಿಸಿಕೊಂಡಿದ್ದು, ಹುಡುಕುವ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಇದರಿಂದ ಆತಂಕ ಉಂಟಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *