ಸಿಎಂ ನೈತಿಕ ಪೊಲೀಸ್‍ಗಿರಿಗೆ ಪುಷ್ಠಿ ನೀಡುವಂತೆ ಮಾತನಾಡಿದ್ದಾರೆ: ರಮಾನಾಥ ರೈ

ಹಾವೇರಿ: ನಮ್ಮ ಭಾಗದಲ್ಲಿ ನೈತಿಕ ಪೊಲೀಸ್‍ಗಿರಿ ನಡೆಯುತ್ತಿದೆ. ಬಿಜೆಪಿ ಯಾವಾಗ ನೆಲೆ ಕಳೆದುಕೊಳ್ಳುತ್ತದೆ ಆಗ ಇಂತಹ ಘಟನೆಗಳು ನಡೆಯುತ್ತದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಅವರು ಕೂಡ ನೈತಿಕ ಪೊಲೀಸ್‍ಗಿರಿಗೆ ಪುಷ್ಠಿ ನೀಡುವಂತೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಮಾನಾಥ ರೈ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಮಾತನಾಡಿದ ಅವರು, ಸಂಘ ಪರಿವಾರದ ಕೆಲವು ಸಂಘಟನೆಗಳು ಈ ರೀತಿ ಕೆಲಸಗಳನ್ನು ಮಾಡುತ್ತಿದೆ. ಅವುಗಳನ್ನು ಆ ರೀತಿ ಮಾಡಿಸಲಾಗುತ್ತಿದೆ. ಇದು ನೈತಿಕ ಪೊಲೀಸ್‍ಗಿರಿ ಅಲ್ಲ, ಅನೈತಿಕ ಪೊಲೀಸ್‍ಗಿರಿ. ಇದರಿಂದ ಮತೀಯ ಸಾಮರಸ್ಯ ಕದಡುವಂತಾಗುತ್ತದೆ. ಜವಾಬ್ದಾರಿ ಸ್ಥಾನದಲ್ಲಿರುವವರು ಈ ರೀತಿ ಮಾತನಾಡಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

ರಾಜ್ಯದಲ್ಲಿ ಶಾಂತಿ, ಸಮಾಧಾನ ಇರಬೇಕು. ಮನುಷ್ಯರ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಹೀಗಾಗಿ ಸಿಎಂ ಅವರ ಹೇಳಿಕೆಯನ್ನು ಖಂಡಿಸುತ್ತೇನೆ. ಕನ್ಯಾಕುಮಾರಿಯಿಂದ ಹಿಮಾಲಯದವರೆಗೆ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವ ಪಕ್ಷ ಕಾಂಗ್ರೆಸ್. ಸಂವಿಧಾನವನ್ನು ಯಥಾವತ್ತಾಗಿ ಜನರಿಗೆ ಕೊಡಬೇಕು ಅನ್ನೋದು ನಮ್ಮ ಪಕ್ಷದ ನಿಲುವು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ

Comments

Leave a Reply

Your email address will not be published. Required fields are marked *