ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಸಿಎಂ, ಡಿಸಿಎಂ ಮಧ್ಯೆ ಭಿನ್ನಾಭಿಪ್ರಾಯ ಸ್ಫೋಟ!

ಬೆಂಗಳೂರು: ಲೋಕಸಭೆ ಚುನಾವಣೆಗೆ (Lok Saba Election) ಕಾಂಗ್ರೆಸ್ (Congress) ಭರ್ಜರಿ ಸಿದ್ಧತೆ ನಡೆಸುತ್ತಿದ್ದು ಬುಧವಾರ ಬೆಂಗಳೂರಿನ ಕ್ವಿನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಸಿಎಂ-ಡಿಸಿಎಂ ಮಧ್ಯೆ ಮುಸುಕಿನ ಗುದ್ದಾಟ ನಡೆದಿದೆ. ನಿಗಮ ಮಂಡಳಿ ವಿಚಾರದಲ್ಲಿ ಇಬ್ಬರ ಭಿನ್ನಾಭಿಪ್ರಾಯ ಸ್ಫೋಟಗೊಂಡಿರುವ ವಿಚಾರ ಮೂಲಗಳಿಂದ ಪಬ್ಲಿಕ್‌ ಟಿವಿಗೆ ತಿಳಿದುಬಂದಿದೆ.

ಶೀಘ್ರವಾಗಿ ನಿಗಮ ಮಂಡಳಿ ನೇಮಕ ನಡೆಯುತ್ತದೆ. ಶಾಸಕರಿಗೆ ಅವಕಾಶ ಸಿಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಇದಕ್ಕೆ ಡಿಕೆ ಶಿವಕುಮಾರ್‌(DK Shivakumar) ಶಾಸಕರು ಹಾಗೂ ಕಾರ್ಯಕರ್ತರು ಇಬ್ಬರಿಗೂ ಅವಕಾಶ ಸಿಗಲಿದೆ ಎಂದಿದ್ದಾರೆ. ಆಗ ಸಭೆಯಲ್ಲಿ ಇದ್ದ ಕಾರ್ಯಕರ್ತರು ಹೋ.. ಎಂದು ಕೂಗಿ ಮೌನವಾಗಿ ಕುಳಿತ ಪ್ರಸಂಗ ನಡೆದಿದೆ. ಇದನ್ನೂ ಓದಿ: ಇನ್ಮುಂದೆ ದೇಗುಲಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ- ನಿಯಮ ಮೀರಿದ್ರೆ ಸಿಗಲ್ಲ ಮಂಗಳಾರತಿ, ಪ್ರಸಾದ!

ಡಿಕೆಶಿ ಹೇಳಿಕೆ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇನ್ನೊಂದು ರೀತಿಯಲ್ಲಿಸಮಜಾಯಿಷಿ ಕೊಡಲು ಮುಂದಾಗಿದ್ದಾರೆ. ಆಗ ಮತ್ತೆ ಮಾತನಾಡಿದ ಡಿಸಿಎಂ ಡಿಕೆಶಿ ನಿಗಮ ಮಂಡಳಿಯಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಸಮಾನ ಅವಕಾಶ ಸಿಗಲಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ.

ಡಿಕೆಶಿ ಹೇಳಿದ ಬೆನ್ನಲ್ಲೇ ಕಾರ್ಯಕ್ರಮದಲ್ಲಿದ್ದ ಕಾರ್ಯಕರ್ತರಲ್ಲಿ ಕೆಲವರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇರುಸುಮುರುಸಿಗೆ ಒಳಗಾದ ಸಿಎಂ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿ ಜಾರಿಕೊಂಡರು ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಜೈಲಿಂದ ಹೊರ ಬಂದ ತಕ್ಷಣ ಕ್ಷಮೆ ಕೇಳಿದ ಕರವೇ ನಾರಾಯಣಗೌಡ

 

ಈ ಸಭೆಯಲ್ಲಿ ಮಾತನಾಡಿದ ಡಿಕೆಶಿ, ಇದೊಂದು ಮಹತ್ವಪೂರ್ಣ ಸಭೆಯಾಗಿದೆ. ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಹಿರಿಯ ನಾಯಕರು ಲೋಕಾಸಭಾ ಚುನಾವಣೆಯ ಸಂಬಂಧ ತೆಗೆದುಕೊಳ್ಳಬೇಕಾದ ಕೆಲವು ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ದೆಹಲಿಯಲ್ಲಿ ಈ ಕುರಿತು ಸಭೆ ನಡೆಯಲಿದ್ದು, ರಾಜ್ಯದ 28 ಕ್ಷೇತ್ರಗಳಿಗೆ ಸಂಯೋಜಕರಾಗಿ ನೇಮಕಗೊಂಡಿರುವ ಸಚಿವರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ನಮ್ಮ ಅಜೆಂಡಾವಾಗಿದ್ದು, ಇದಕ್ಕಾಗಿ ಎಲ್ಲರೂ ಸೇರಿ ಕೆಲಸಮಾಡೋಣ ಎಂದು ತಿಳಿಸಿದ್ದಾರೆ.