ದೋಸ್ತಿ ಸರ್ಕಾರ ಅಸ್ಥಿರಕ್ಕೆ ಯತ್ನಿಸಿದ್ರೆ ಹುಷಾರ್ – ಹೊಸ ಬಾಂಬ್ ಸಿಡಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಆಪರೇಷನ್ ಕಮಲ ಮಾಡುತ್ತಿರುವ ಬಿಜೆಪಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಹೊಸ ಬಾಂಬ್ ಸಿಡಿಸಿದ್ದಾರೆ.

ನಮ್ಮಿಂದ ಬಿಜೆಪಿಯವರು ಓರ್ವ ಶಾಸಕ ತೆರಳಿದ್ರೆ, ಬಿಜೆಪಿಯಿಂದ 10 ಶಾಸಕರನ್ನು ನಾವು ಸೆಳೆಯುತ್ತೇವೆ ಎಂದು ನೇರವಾಗಿ ಹೊಸ ಬಾಂಬ್ ಸಿಡಿಸಿದ್ದಾರೆ. ನಮ್ಮ ಸರ್ಕಾರ ಬೀಳಿಸಲು ಬಿಜೆಪಿ, ಆರ್‍ಎಸ್‍ಎಸ್ ಹಾಗೂ ಕೇಂದ್ರ ಸರ್ಕಾರದ ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರುವ ಪ್ರಯತ್ನದಲ್ಲಿ ಬಿಜೆಪಿ ಇದೆ. ಆದರೆ ಇದು ಕನಸಾಗಿಯೇ ಉಳಿಯಲಿದೆ ಎಂದು ಅವರು ಭವಿಷ್ಯ ನುಡಿದರು.

ಅಬ್ದುಲ್ ಕಲಾಂ ಆಜಾದ್ ಅವರೆಲ್ಲರೂ ಸೇರಿ ಒಪ್ಪದಂತಹ ಅನೇಕ ವಿಚಾರಗಳಿಗೆ ಕೇಂದ್ರ ಸರ್ಕಾರ ಇಂದು ಕೊಡಲಿ ಪೆಟ್ಟು ಹಾಕುತ್ತಿದೆ. ರಿಸರ್ವ್ ಬ್ಯಾಂಕ್ ಆಗಿರಬಹುದು, ಮೂಲಭೂತ ಹಕ್ಕಾಗಿ ಸಿಕ್ಕಿರುವ ನರೇಗಾ ಯೋಜನೆ, ಫುಡ್ ಸೆಕ್ಯೂರಿಟಿ ಆ್ಯಕ್ಟ್, ಶಿಕ್ಷಣ ಹಕ್ಕು, ನ್ಯಾಷನಲ್ ಹೆಲ್ತ್ ವಿಷನ್ ಇವುಗಳಿಗೆಲ್ಲಕ್ಕೂ ಕೂಡ ಸರ್ಕಾರ ಕೊಡಲಿ ಪೆಟ್ಟು ಹಾಕ್ತಾ ಇದೆ. ಸಂವಿಧಾನ ಉಳಿಸಿಕೊಳ್ಳುವ, ದೇಶದ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಯುವಕರ ಮೇಲಿದೆ ಎಂದು ಹೇಳಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *