Congress Cabinet Ministers : ಡಿಸಿಎಂ ಡಿಕೆಶಿಗೆ ಎರಡು ಪ್ರಬಲ ಖಾತೆ

ಬೆಂಗಳೂರು: ಅಂದುಕೊಂಡಂತೆ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ಡಿಸಿಎಂ ಹುದ್ದೆಯೊಂದಿಗೆ ಎರಡು ಪ್ರಬಲ ಖಾತೆಗಳ ಜವಾಬ್ದಾರಿ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದ್ದು, ಸಿಎಂ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ ತಕ್ಷಣವೇ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಇದನ್ನೂ ಓದಿ: ರಾಜ್ಯದ ನೂತನ ಸಚಿವರಿಗೆ ಖಾತೆ ಹಂಚಿಕೆ- ರಾಮಲಿಂಗಾ ರೆಡ್ಡಿಗೆ ಸಾರಿಗೆ ಜೊತೆ ಮುಜರಾಯಿ

ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿಗೆ ಸಾರಿಗೆ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆ ನೀಡಲಾಗಿದೆ. ಸಮಾಜ ಕಲ್ಯಾಣ ಅಥವಾ ಕಂದಾಯ ಖಾತೆ ಬಗ್ಗೆ ಒಲವು ಹೊಂದಿದ್ದರೆನ್ನಲಾದ ಕೆ.ಹೆಚ್ ಮುನಿಯಪ್ಪಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಜೊತೆಗೆ ಗ್ರಾಹಕ ವ್ಯವಹಾರಗಳ ಖಾತೆ ಜವಾಬ್ದಾರಿ ನೀಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರದಲ್ಲಿ ಒಂದೇ ಡಿಸಿಎಂ – ಎಐಸಿಸಿ ಅಧಿಕೃತ ಘೋಷಣೆ

ಜೊಗತೆಗೆ ಹೈಕಮಾಂಡ್‌ ಈ ಹಿಂದೆಯೇ ಹೇಳಿದಂತೆ ಡಿ.ಕೆ ಶಿವಕುಮಾರ್‌ ಅವರಿಗೆ ಎರಡು ಪ್ರಬಲ ಖಾತೆಗಳನ್ನ ನೀಡಲಾಗಿದೆ. 135 ಸ್ಥಾನಗಳೊಂದಿಗೆ ಬಹುಮತ ಪಡೆದು ಸರ್ಕಾರ ಸ್ಥಾಪಿಸಿದ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಸಿಎಂ ಆಗಲೇಬೇಕೆಂದು ಪಟ್ಟು ಹಿಡಿದಿದ್ದರು. ಆದ್ರೆ ಸಿಎಂ ಹುದ್ದೆಯನ್ನು ಸಿದ್ದರಾಮಯ್ಯ ಅವರಿಗೆ ನೀಡಿದ ಹಿನ್ನೆಲೆಯಲ್ಲಿ ಡಿಕೆಶಿ ಅವರಿಗೆ ಡಿಸಿಎಂ ಹುದ್ದೆಯೊಂದಿಗೆ ಎರಡು ಪ್ರಬಲ ಖಾತೆಗಳನ್ನ ಆಯ್ಕೆ ಮಾಡಿಕೊಳ್ಳುವಂತೆ ಹೈಕಮಾಂಡ್‌ ಆಪ್ಷನ್‌ ನೀಡಿತ್ತು. ಸೋಮವಾರ (ಮೇ 29) ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಡಿಕೆ ಶಿವಕುಮಾರ್‌ ಅವರಿಗೆ ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಖಾತೆಯನ್ನ ಹಂಚಿಕೆ ಮಾಡಲಾಗಿದೆ.

ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನ ತಮ್ಮಲ್ಲೇ ಇರಿಸಿಕೊಂಡಿದ್ದಾರೆ. ಇದರೊಂದಿಗೆ ಸಂಪುಟ ವ್ಯವಹಾರ, ಡಿಪಿಎಆರ್, ಗುಪ್ತಚರ, ವಾರ್ತಾ ಇಲಾಖೆ, ಐಟಿಬಿಟಿ ಇಲಾಖೆಗಳನ್ನೂ ತಾವೇ ವಹಿಸಿಕೊಂಡಿದ್ದಾರೆ.