ಮೈಸೂರು: ಶಾಸಕ ತನ್ವೀರ್ ಸೇಠ್ ಅವರ ಕುತ್ತಿಗೆ ಭಾಗಕ್ಕೆ ಯುವಕನೋರ್ವ ಚಾಕುವಿನಿಂದ ಇರಿದಿದ್ದಾನೆ.
ಮೈಸೂರು ಜಿಲ್ಲೆಯ ನರಸಿಂಹರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಮೇಲೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬನ್ನಿಮಂಟಪದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ತನ್ವೀರ್ ಸೇಠ್ ಭಾಗವಹಿಸಿದ ವೇಳೆ ಈ ಘಟನೆ ನಡೆದಿದೆ.

ಸಮಾರಂಭದಲ್ಲಿ ಕುಳಿತಿದ್ದ ತನ್ವೀರ್ ಸೇಠ್‍ಗೆ ಅವರ ಬಳಿ ಬಂದ ಫರಾನ್ ಚಾಕುವಿನಿಂದ ಕುತ್ತಿಗೆ ಭಾಗಕ್ಕೆ ಇರಿದು ಪರಾರಿಯಾಗಲು ಪ್ರಯತ್ನಿಸಿದಾಗ ಸ್ಥಳೀಯರು ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳು ತನ್ವೀರ್ ಸೇಠ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಫರಾನ್ ಅನ್ನು ಬಂಧಿಸಿ ತನಿಖೆ ಮಾಡುತ್ತಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರಾದ ಕೆ.ಟಿ ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply