ರಾಮನಗರ ಮೈತ್ರಿಗೆ ಎಂಎಲ್‍ಸಿ ಲಿಂಗಪ್ಪ ವಿರೋಧ: ಬಂಡಾಯ ಅಭ್ಯರ್ಥಿಯನ್ನ ಹಾಕ್ತೀವಿ

ರಾಮನಗರ: ವಿಧಾನಸಭಾ ಉಪಚುನಾವಣೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಗೆ ರಾಮನಗರದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ವಿರೋಧ ವ್ಯಕ್ತಪಡಿಸಿದ್ದು, ಜೆಡಿಎಸ್‍ಗೆ ಬೆಂಬಲ ನೀಡುವ ಮಾತೇ ಇಲ್ಲ ಎಂದು ಕಿಡಿಕಾರಿದ್ದಾರೆ.

ರಾಮನಗರ ಉಪಚುನಾವಣೆಯಲ್ಲಿ ಬಿಜೆಪಿಗೆ ನಾವು ಬೆಂಬಲ ನೀಡುವುದಿಲ್ಲ. ಇತ್ತ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ. ಬಂಡಾಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಆಲೋಚನೆಯನ್ನು ಕೈಬಿಟ್ಟಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಇದನ್ನು ಓದಿ: ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಪಕ್ಷದ ಜವಾಬ್ದಾರಿಗೆ ಬಸವರಾಜ ಸಿಂಧೂರ ರಾಜೀನಾಮೆ?


ದೂರವಾಣಿ ಮೂಲಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿರುವ ಲಿಂಗಪ್ಪ ಅವರು, ಬಿಜೆಪಿಯವರ ನೀತಿ ನಿಯಮಗಳೇ ಬೇರೆ. ನಮಗೆ ಅದು ಹೊಂದಾಣಿಕೆ ಆಗುವುದಿಲ್ಲ. ಹೀಗಾಗಿ ಅವರಿಗೆ ಬೆಂಬಲ ನೀಡುವುದಿಲ್ಲ. ಅಷ್ಟೇ ಅಲ್ಲದೆ ಇಲ್ಲಿಯವರೆಗೂ ಬಿಜೆಪಿಯ ಯಾವುದೇ ನಾಯಕರೂ ನಮ್ಮನ್ನು ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಕ್ಕೆ ಪ್ರಯತ್ನಿಸಿದರೂ ನಿರ್ಧಾರವನ್ನು ಬದಲಿಸುವುದಿಲ್ಲ ಎಂದು ಹೇಳಿದರು.

ನಾವು ಸ್ಥಳೀಯವಾಗಿ ಪರಿಸ್ಥಿತಿ ನೋಡಬೇಕಿದೆ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ತಮ್ಮ ಸ್ಥಾನಮಾನಕ್ಕೆ ತಕ್ಕಂತೆ ಮಾತನಾಡಿದ್ದಾರೆ. ಒಂದು ವೇಳೆ ರಾಮನಗರ ಕ್ಷೇತ್ರವನ್ನು ಸಂಪೂರ್ಣವಾಗಿ ಜೆಡಿಎಸ್‍ಗೆ ಬಿಟ್ಟುಕೊಟ್ಟರೆ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಆಲೋಚನೆ ಮಾಡಿರುವೆ. ಸದ್ಯದ ಬೆಳವಣಿಗೆಯನ್ನು ಗಮನಿಸಿಯೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಥಿಸುವ ಆಯ್ಕೆ ಇಟ್ಟುಕೊಂಡಿರುವೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *