ಯುಗಾದಿಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ: ಎಂಬಿ ಪಾಟೀಲ

ವಿಜಯಪುರ: ಯುಗಾದಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಕೆಪಿಸಿಸಿ (KPCC) ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ (M.B. Patil) ವಿಜಯಪುರದಲ್ಲಿ (Vijayapura) ಹೇಳಿದ್ದಾರೆ.

ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ (Mallikarjun Kharge) ನೇತೃತ್ವದಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಈಚೆಗೆ ಸಭೆ ನಡೆಸಲಾಗಿತ್ತು. ಈ ವೇಳೆ 125 ಅಭ್ಯರ್ಥಿಗಳ ಪಟ್ಟಿಯನ್ನು ಅಖೈರುಗೊಳಿಸಲಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ, ಯುಗಾದಿಗೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಯುಗಾದಿ ಒಳಗೆ ಕೆಆರ್‌ಪಿಪಿ ಪಕ್ಷದ ಚಿನ್ಹೆ ಗೊಂದಲ ಪರಿಹಾರ: ಜನಾರ್ದನ ರೆಡ್ಡಿ

ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi) ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನಡುವೆ ನಡೆದ ಮಾತುಕತೆ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯ, ಬಾದಾಮಿ, ಕೋಲಾರ ಹಾಗೂ ವರುಣ ಕ್ಷೇತ್ರ ಎಲ್ಲಿ ನಿಂತರೂ ಚುನಾವಣೆಯಲ್ಲಿ ಗೆಲ್ಲುತ್ತಾರೆ. 40 ಸಾವಿರ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸರ್ಕಾರಕ್ಕೆ ಪತ್ರ ಬರೆದ ವಿಚಾರವಾಗಿ, ವಿರೋಧಿಗಳು ಚುನಾವಣೆ ಸಂದರ್ಭದಲ್ಲಿ ಖಾಸಗಿ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ನನ್ನ ಫೋನ್ ಸಿಡಿಆರ್ (CDR) ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಅಧಿಕಾರಿಗಳು ಆಮಿಷಕ್ಕೊಳಗಾಗಿ ಫೋನ್ ಸಿಡಿಆರ್ ಕೊಡುವವರು ಇರುತ್ತಾರೆ. ಹಾಗೇನಾದರೂ ಆದರೆ ಸರ್ಕಾರವೇ ಜವಾಬ್ದಾರಿ ಎಂದು ಪತ್ರ ಬರೆದಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ ಕರ್ನಾಟಕದ ಇತಿಹಾಸದ ಕಥೆ ಬರೆಯಲು ತಿಹಾರ್ ಜೈಲಿಗೆ ಹೋದ್ರಾ? – ಕಟೀಲ್ ಟೀಕೆ

Comments

Leave a Reply

Your email address will not be published. Required fields are marked *