ಎನ್‍ಸಿಪಿ ಯೂಟರ್ನ್ – ಶಿವಸೇನೆಯ ಸಿಎಂ ಕನಸು ಭಗ್ನ?

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನ ತನಗೆ ಸಿಗಬೇಕೆಂದು ಹಠ ಹಿಡಿದಿರುವ ಶಿವಸೇನೆಯ ಕನಸು ಕನಸಾಗಿಯೇ ಉಳಿಯುತ್ತಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ದೆಹಲಿಯಲ್ಲಿ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ನೀಡಿದ ಒಂದು ಹೇಳಿಕೆಯಿಂದ ಸರ್ಕಾರ ರಚನೆಯ ಕನಸು ಕಂಡಿದ್ದ ಶಿವಸೇನೆ ಆಸೆ ಭಗ್ನವಾಗುವ ಸಾಧ್ಯತೆಯಿದೆ.

ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಸಂಜೆ ನಿಯೋಜನೆಗೊಂಡಿರುವ ಸಭೆ ಹಿನ್ನೆಲೆಯಲ್ಲಿ ಭಾಗವಹಿಸಲು ಶರದ್ ಪವಾರ್ ದೆಹಲಿಗೆ ಆಗಮಿಸಿದರು. ಈ ವೇಳೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಶಿವಸೇನೆ ಜೊತೆಗೆ ಕಾಂಗ್ರೆಸ್, ಎನ್‍ಸಿಪಿ ಸರ್ಕಾರ ರಚನೆ ಸಾಧ್ಯತೆ ಇದೆಯೇ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ನಂತರ ಮುಂದುವರಿಸಿ ಬಿಜೆಪಿ ಮತ್ತು ಶಿವಸೇನೆ ಒಟ್ಟಾಗಿ ಚುನಾವಣೆಗೆ ಹೋಗಿದ್ದರೆ ನಾವು ಮತ್ತು ಕಾಂಗ್ರೆಸ್ ಒಟ್ಟಾಗಿ ಚುನಾವಣೆ ಎದುರಿಸಿದ್ದೆವು. ಅವರು ಅವರ ಮಾರ್ಗವನ್ನು ಆರಿಸಿಕೊಳ್ಳಲಿ. ನಾವು ನಮ್ಮ ರಾಜಕೀಯ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಈ ಉತ್ತರಕ್ಕೆ ಮಾಧ್ಯಮಗಳು, ಶಿವಸೇನೆ ನಿಮ್ಮ ಜೊತೆ ಸರ್ಕಾರ ನಡೆಸಲಿದ್ದೇವೆ ಎಂದು ಹೇಳಿಕೆ ನೀಡಿದೆಯಲ್ಲವೇ ಎಂದು ಪ್ರಶ್ನಿದ್ದಕ್ಕೆ ಪವಾರ್, ‘ಹೌದೇ’ ಎಂದಷ್ಟೇ ಹೇಳಿ ಸ್ಥಳದಿಂದ ತೆರಳಿದ್ದಾರೆ.

ಇಲ್ಲಿಯವರೆಗೆ ಶಿವಸೇನೆ, ಕಾಂಗ್ರೆಸ್, ಎನ್‍ಸಿಪಿ ಮುಖಂಡರು ಒಟ್ಟಾಗಿ ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿರಲಿಲ್ಲ. ಮೈತ್ರಿ ಸೂತ್ರದ ಪ್ರಕಾರ ಶಿವಸೇನೆ 5 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯನ್ನು ತನ್ನ ಬಳಿ ಉಳಿಸಿಕೊಳ್ಳಲಿದೆ. ಜೊತೆಗೆ ಶಿವಸೇನೆ ಹಾಗೂ ಎನ್‍ಸಿಪಿ ತಲಾ 14 ಸಚಿವ ಸ್ಥಾನವನ್ನು ಹಂಚಿಕೊಳ್ಳಲಿವೆ. ಮೈತ್ರಿಯ ಭಾಗವಾಗಿರುವ ಕಾಂಗ್ರೆಸ್‍ಗೂ 12 ಸಚಿವ ಸ್ಥಾನ ಸಿಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿತ್ತು.

ಕಳೆದ ವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಶಿವಸೇನೆ ನಾಯಕ ಸಂಜಯ್ ರಾವತ್, 5 ವರ್ಷ ಮುಖ್ಯಮಂತ್ರಿ ಸ್ಥಾನ ಶಿವಸೇನೆ ಬಳಿಯೇ ಇರುತ್ತದೆ. ಅಷ್ಟೇ ಅಲ್ಲದೆ ಮುಂದಿನ 25 ವರ್ಷಗಳ ಕಾಲ ಶಿವಸೇನೆ ಮುಖ್ಯಮಂತ್ರಿ ಸ್ಥಾನವನ್ನು ಹೊಂದಲಿದೆ ಎಂದು ತಿಳಿಸಿದ್ದರು.

ಸಂಭಾವ್ಯ ಮೈತ್ರಿ ಪಕ್ಷಗಳ ನಾಯಕರಾದ ಸೋನಿಯಾ ಹಾಗೂ ಶರದ್ ಪವಾರ್ ಅವರೊಂದಿಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಸಚಿವ ಸ್ಥಾನ ಹಂಚಿಕೆ ಸೂತ್ರದ ಬಗ್ಗೆ ಅವರು ಚಿಂತಿಸಬೇಕಾಗಿಲ್ಲ. ಅವರಿಗೆ ನೀಡಬೇಕಾದ ಸ್ಥಾನಮಾನವನ್ನು ಶಿವಸೇನೆ ನೀಡಲಿದೆ ಎಂದು ಸಂಜಯ್ ರಾವತ್ ಹೇಳಿದ್ದರು.

ಅಕ್ಟೋಬರ್ 21ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಶಿವಸೇನೆ ಪಕ್ಷಗಳು 161 ಸ್ಥಾನಗಳನ್ನು ಗೆದ್ದುಕೊಂಡಿವೆ. ಬಿಜೆಪಿ 105, ಶಿವಸೇನೆ 56 ಸ್ಥಾನಗಳನ್ನು ಗೆದ್ದರೂ ಅಧಿಕಾರ ಹಂಚಿಕೆ ಕುರಿತು ಎರಡೂ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಎರಡೂವರೆ ವರ್ಷಗಳ ಅವಧಿಗೆ ಮುಖ್ಯಮಂತ್ರಿ ಹುದ್ದೆ ನಮಗೆ ಕೊಡಲೇಬೇಕು ಎಂದು ಶಿವಸೇನೆ ಹಠ ಹಿಡಿದಿತ್ತು. ಇದಕ್ಕೆ ಬಿಜೆಪಿ ಒಪ್ಪದ ಹಿನ್ನೆಲೆಯಲ್ಲಿ ಶಿವಸೇನೆಯೂ ಕಾಂಗ್ರೆಸ್ ಹಾಗೂ ಎನ್‍ಸಿಪಿ ಜೊತೆಗೆ ಸೇರಿ ಸರ್ಕಾರ ರಚಿಸಲು ಮುಂದಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಎನ್‍ಸಿಪಿ 54 ಸ್ಥಾನ ಹಾಗೂ ಕಾಂಗ್ರೆಸ್ 44 ಸ್ಥಾನ ಪಡೆದುಕೊಂಡಿದೆ.

ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಸಂಜೆ ನಿಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಭಾಗವಹಿಸಲು ಶರದ್ ಪವಾರ್ ದೆಹಲಿಗೆ ಆಗಮಿಸಿದರು. ಈ ವೇಳೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಶಿವಸೇನೆ ಜೊತೆಗೆ ಕಾಂಗ್ರೆಸ್, ಎನ್‍ಸಿಪಿ ಸರ್ಕಾರ ರಚನೆ ಸಾಧ್ಯತೆ ಇದೆಯೇ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ನಂತರ ಮುಂದುವರಿಸಿ ಬಿಜೆಪಿ ಮತ್ತು ಶಿವಸೇನೆ ಒಟ್ಟಾಗಿ ಚುನಾವಣೆಗೆ ಹೋಗಿದ್ದರೆ ನಾವು ಮತ್ತು ಕಾಂಗ್ರೆಸ್ ಒಟ್ಟಾಗಿ ಚುನಾವಣೆ ಎದುರಿಸಿದ್ದೆವು. ಅವರು ಅವರ ಮಾರ್ಗವನ್ನು ಆರಿಸಿಕೊಳ್ಳಲಿ. ನಾವು ನಮ್ಮ ರಾಜಕೀಯ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

ಈ ಉತ್ತರಕ್ಕೆ ಮಾಧ್ಯಮಗಳು, ಶಿವಸೇನೆ ನಿಮ್ಮ ಜೊತೆ ಸರ್ಕಾರ ನಡೆಸಲಿದ್ದೇವೆ ಎಂದು ಹೇಳಿಕೆ ನೀಡಿದೆಯಲ್ಲವೇ ಎಂದು ಪ್ರಶ್ನಿದ್ದಕ್ಕೆ ಪವಾರ್, ‘ಹೌದೇ’ ಎಂದಷ್ಟೇ ಹೇಳಿ ಸ್ಥಳದಿಂದ ತೆರಳಿದ್ದಾರೆ.

Comments

Leave a Reply

Your email address will not be published. Required fields are marked *