ನಾಲ್ವರು ಬಿಜೆಪಿ ಶಾಸಕರನ್ನ ಸೆಳೆಯಲು ಕಾಂಗ್ರೆಸ್ ಯತ್ನ!

ಕೊಪ್ಪಳ: ದೇಶದ ಪ್ರಧಾನಿಯಾಗಿ 2ನೇ ಬಾರಿಗೆ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದ್ದು, ಆಪರೇಷನ್ ಕಮಲದಲ್ಲಿ ಸೋತು ಕುಳಿತಿದ್ದ ಬಿಜೆಪಿಗೆ ಇದೀಗ ಶಾಕ್ ಎದುರಾಗಿದೆ.

ಕೇವಲ ನಮ್ಮ ಶಾಸಕರನ್ನು ಹಿಡಿದಿಟ್ಟುಕೊಂಡರೆ ಸಾಲದು ಆಪರೇಷನ್ ಕಮಲಕ್ಕೆ ತಿರುಗೇಟು ನೀಡಲು ಬಿಜೆಪಿಯ ಎಂಎಲ್‍ಎ ಗಳನ್ನು ಸೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಮುಂದಾಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

‘ಆಪರೇಷನ್ ಕಮಲ’ ವರ್ಕೌಟ್ ಆಗದೆ ಸುಮ್ಮನಾಗಿರೋ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ದೋಸ್ತಿ ಸರ್ಕಾರ ನೀಡಲು ಮುಂದಾಗಿದೆ. ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಖಾಡಕ್ಕಿಳಿದಿದ್ದಾರೆ. ಈ ಮೂಲಕ ನಾಲ್ವರು ಬಿಜೆಪಿ ಶಾಸಕರನ್ನ ಕಾಂಗ್ರೆಸ್ ಸೆಳೆಯಲು ಪ್ರಯತ್ನ ಮಾಡುತ್ತಿದೆ ಎಂಬ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿದೆ.

ಕನಕಗಿರಿ ಶಾಸಕ ಬಸವರಾಜ್ ದಡೇಸಗೂರ್, ಸುರಪುರ ಶಾಸಕ ರಾಜುಗೌಡ, ಸಿರಗುಪ್ಪ ಶಾಸಕ ಸೋಮಲಿಂಗಪ್ಪ ಮತ್ತು ರಾಯಚೂರು ಶಾಸಕ ಡಾ. ಶಿವರಾಜ್ ಪಾಟೀಲ್‍ಗೆ ಕೈ ಗಾಳ ಹಾಕಿದೆ. ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು ಬಗ್ಗೆ ಈಗಾಗಲೇ ಸಿದ್ದರಾಮಯ್ಯ ಅವರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಒಂದು ವೇಳೆ ಆಪರೇಷನ್ ಸಕ್ಸಸ್ ಆದಲ್ಲಿ ಸರ್ಕಾರ ರಚನೆಯ ಪ್ಲಾನ್ ಮಾಡಿಕೊಂಡಿರುವ ಬಿಜೆಪಿಗೆ ಭಾರೀ ಹೊಡೆತ ಬೀಳೋದು ಗ್ಯಾರಂಟಿ ಎಂಬ ಚರ್ಚೆಗಳು ರಾಜ್ಯ ರಾಜಕೀಯ ಅಂಗಳದಲ್ಲಿ ಕೇಳಿಬರುತ್ತಿದೆ.

Comments

Leave a Reply

Your email address will not be published. Required fields are marked *