ಕಾಂಗ್ರೆಸ್ ಪಕ್ಷದಲ್ಲಿ ಯೌವ್ವನ ನಿರ್ಧಾರವಾಗುವುದು 50ರ ನಂತರವೇ?: ಬಿಜೆಪಿ

ಬೆಂಗಳೂರು: ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡುವ ಮುನ್ಸೂಚನೆ ನೀಡಲಾಗಿದೆ. ಆದರೆ ಇದು ನಕಲಿ ಗಾಂಧಿ ಕುಟುಂಬಿಕರಿಗೆ ಮತ್ತು ಅವರ ಪಾದ ಪೂಜಕರಿಗೆ ಅನ್ವಯವಾಗುವುದಿಲ್ಲ ಎಂಬ ಷರತ್ತು ಅಳವಡಿಸಿರುವುದು ಅವರ ಬೂಟಾಟಿಕೆಗೆ ಸಾಕ್ಷಿ. ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50ರ ನಂತರವೇ? ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಾಂಗ್ರೆಸ್ ಕಾಲೆಳೆದಿದೆ.

bjp - congress

ಟ್ವೀಟ್‍ನಲ್ಲಿ ಏನಿದೆ?
ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡುವ ಮುನ್ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಯುವ ನಾಯಕರು ಯಾರು? ಕಾಂಗ್ರೆಸ್ ಪಕ್ಷದಲ್ಲಿ ಯೌವ್ವನ ನಿರ್ಧಾರವಾಗುವುದು 50ರ ನಂತರವೇ? ಕಾಂಗ್ರೆಸ್ ಚಿಂತನಾ ಶಿಬಿರದಲ್ಲೇನೋ ವಯೋನಿವೃತ್ತಿಯ ಪ್ರಸ್ತಾಪವಾಗಿದೆ. ಆದರೆ ಯಾವಾಗ? 70 ಕಳೆದ ಮೇಲೂ ಅಧಿಕಾರ ಅನುಭವಿಸಲು ತಂತ್ರಗಾರಿಕೆ ನಡೆಸುವ ಕಾಂಗ್ರೆಸ್ “ಯಯಾತಿ”ಗಳ ಮೋಹ ಕಳಚುವುದೇ? ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಈಗ 60+ ಚಿಂತನಾ ಶಿಬಿರದಲ್ಲಿ 50% ರಷ್ಟು ಕ್ಷೇತ್ರಗಳನ್ನು 50 ವರ್ಷದೊಳಗಿನವರಿಗೆ ನೀಡಬೇಕೆಂದು ಕಾಂಗ್ರೆಸ್ ಸಂಕಲ್ಪ ಮಾಡಿದೆ. ಇದನ್ನೂ ಓದಿ: 2ಎ ಮೀಸಲಾತಿ ನೀಡಿ, ಕೊಟ್ಟಮಾತು ಉಳಿಸಿಕೊಳ್ಳಿ ಸಿಎಂ ಬೊಮ್ಮಾಯಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಈ ನಿಯಮವನ್ನು ರಾಜ್ಯದಲ್ಲಿ ಯಥಾವತ್ತಾಗಿ ಜಾರಿಗೆ ತಂದಲ್ಲಿ ಕಾಂಗ್ರೆಸ್ 60+ ನಿಂದ 30+ ಗೆ ಇಳಿಯುವುದು ನಿಶ್ಚಿತ! ಒಂದು ಮನೆಯಿಂದ ಒಬ್ಬರಿಗೆ ಟಿಕೆಟ್ ಎಂಬುದು ಕಾಂಗ್ರೆಸ್ ಪಕ್ಷದ ಹೊಸ ನಾಟಕ. ನಕಲಿ ಗಾಂಧಿ ಕುಟುಂಬಿಕರಿಗೆ ಮತ್ತು ಅವರ ಪಾದ ಪೂಜಕರಿಗೆ ಅನ್ವಯವಾಗುವುದಿಲ್ಲ ಇದು ಬೂಟಾಟಿಕೆಗೆ ಸಾಕ್ಷಿ. 70 ಮೇಲ್ಪಟ್ಟವರಿಗೆ ಟಿಕೆಟ್ ನೀಡದ ಹೊಸ ನಿಯಮವೂ ಇವರಾರಿಗೂ ಅನ್ವಯವಾಗದು! ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರನ್ನು ದೆಹಲಿಗೆ ಕರೆಸಿ ಸಂಧಾನ ಮಾಡಲು ನಿರ್ಧರಿಸಿದ್ದಾರೆ. ಹಾಗಾದರೆ, ಕಾಂಗ್ರೆಸ್ ಚಿಂತನೆಗೆ ಬದ್ಧರಾಗಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಘೋಷಿಸಬಹುದೇ? ಅಥವಾ 73 ರ ಹುಮ್ಮಸ್ಸಿನಲ್ಲಿ ಕನಕಪುರದ ಬಂಡೆಯನ್ನು ಗುದ್ದಿ ಬೀಳಿಸಬಹುದೇ? ಇದನ್ನೂ ಓದಿ: ಭಾರತದ ವಿದೇಶಾಂಗ ನೀತಿ ಸಂಪೂರ್ಣ ಬದಲಾಗಿದೆ, ಯಾರ ಮಾತನ್ನೂ ಕೇಳಲ್ಲ: ರಾಹುಲ್ ಗಾಂಧಿ

Comments

Leave a Reply

Your email address will not be published. Required fields are marked *