ಒಂದೇ ವರ್ಷದಲ್ಲಿ 8,000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ: ಬೊಮ್ಮಾಯಿ

ಚಿಕ್ಕಮಗಳೂರು: ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಸರ್ಕಾರ ನಮ್ಮದು. ಒಂದೇ ವರ್ಷದಲ್ಲಿ 8,000 ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಚಿಕ್ಕಮಗಳೂರು (Chikkamagaluru) ಜಿಲ್ಲೆ ಕೊಪ್ಪದಲ್ಲಿ ಬಿಜೆಪಿ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾರಾಯಣ ಗುರು ಅವರ ಹೆಸರಿನಲ್ಲಿ ವಸತಿ ಶಾಲೆ, ಎಸ್‌ಸಿ, ಎಸ್‌ಟಿ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣ, 50 ಕನಕದಾಸ ಹಾಸ್ಟೆಲ್ ನಿರ್ಮಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಮಾಡಲಾಗುತ್ತಿದೆ ಎಂದರು.

ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಹ ನಾಡು ಶೃಂಗೇರಿ. ನಾನು ದೇವರ ನಾಡಿಗೆ ಬಂದಿದ್ದೇನೆ ಎಂದ ಮುಖ್ಯಮಂತ್ರಿಗಳು, ಜನಸಂಕಲ್ಪ ಯಾತ್ರೆಗೆ ಜನರ ಬೆಂಬಲ ಸಿಗುತ್ತಿದೆ. ಮೋದಿ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ಆಡಳಿತ ನಡೆಸುತ್ತಿದೆ. ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲದಿಂದ ವಿಜಯ ಸಂಕಲ್ಪ ಯಾತ್ರೆಯಾಗಿ ಯಶಸ್ವಿಯಾಗಿದೆ ಎಂದು ಹೇಳಿದರು.

ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯದಲ್ಲಿ 6,000 ರಾಷ್ಟ್ರೀಯ ಹೆದ್ದಾರಿ ರಸ್ತೆ, ಬಂದರುಗಳ ನಿರ್ಮಾಣ, ಜಲಜೀವನ ಮಿಷನ್ ಯೋಜನೆಗಳು ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿಯಾದ ಕುಡಿಯುವ ನೀರಿನ ಯೋಜನೆಯನ್ನು ಕೇವಲ ಒಂದೇ ವರ್ಷದಲ್ಲಿ 30 ಲಕ್ಷ ಮನೆಗಳಿಗೆ ಪೂರೈಸಲಾಗಿದೆ. ಕೋವಿಡ್ ಅನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮರ್ಥವಾಗಿ ನಿರ್ವಹಿಸಲಾಯಿತು. ಔಷಧಿ, ಆರೋಗ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನೀಡಲಾಯಿತು. ಪ್ರವಾಹದಲ್ಲಿಯೂ 5 ಲಕ್ಷ ರೂ. ಪರಿಹಾರ ನೀಡಲಾಯಿತು. ಬೆಳೆಹಾನಿ ಪರಿಹಾರವನ್ನು ದುಪ್ಪಟ್ಟುಗೊಳಿಸಿ ರೈತರಿಗೆ ನೀಡಲಾಗುತ್ತಿದೆ. ರೈತರಿಗೆ 5 ಹೆಚ್‌ಪಿ ಉಚಿತ ವಿದ್ಯುತ್ ನೀಡಲಾಗುತ್ತಿದೆ. ರೈತ ಮಕ್ಕಳಿಗೆ ವಿದ್ಯಾನಿಧಿ, 6 ಲಕ್ಷ ರೈತ ಕೂಲಿಕಾರ್ಮಿಕರಿಗೆ ವಿದ್ಯಾನಿಧಿ ನೀಡುತ್ತಿದೆ ಎಂದು ತಿಳಿಸಿದರು.

5 ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ, ಪ್ರತಿ ಗ್ರಾಮದಲ್ಲಿ 2 ವಿವೇಕಾನಂದ ಯುವಕ ಸಂಘಕ್ಕೆ ಆರ್ಥಿಕ ಸಹಾಯ ನೀಡಿ, ಅವರ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ ಕಂಬಾರ, ಕುಂಬಾರ, ಬಡಿಗೇರ, ಟೇಲರ್‌ಗಳಿಗೆ ಅವರ ವೃತ್ತಿ ಆಧಾರದ ಮೇಲೆ ಕಾಯಕ ಯೋಜನೆಯ ಮೂಲಕ ಸಾಲ ನೀಡಲಾಗುತ್ತದೆ ಎಂದರು. ಇದನ್ನೂ ಓದಿ: ಡಿಸೆಂಬರ್ ಒಳಗೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ – ಸಿಎಂ

ಸರ್ಕಾರ ಹಾಗೂ ಜನರು ಶ್ರೀಮಂತರಾಗಬೇಕು. ಜನರ ಬಳಿ ಹಣ ಇದ್ದರೆ ಮಾತ್ರ ಸರ್ಕಾರ ಶ್ರೀಮಂತವಾಗುತ್ತದೆ. ದುಡಿಮೆಯೇ ದೊಡ್ಡಪ್ಪ ಎನ್ನುವ ಕಾಲವಿದು. ಜನರು ಆರ್ಥಿಕವಾಗಿ ಸಬಲರಾಗಬೇಕು ಎಂಬುದು ಸರ್ಕಾರದ ಸಂಕಲ್ಪ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಚಿವರಾದ ಭೈರತಿ ಬಸವರಾಜ್, ಗೋವಿಂದ ಕಾರಜೋಳ, ಮಾಜಿ ಸಚಿವ ಡಿ.ಎನ್ ಜೀವರಾಜ್ ಹಾಗೂ ಚಿಕ್ಕಮಗಳೂರು ಜಿಲ್ಲೆ ಶಾಸಕರು ಸೇರಿ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – ವಿವಿಧ ಸಮಿತಿಗಳು ಪ್ರಕಟ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *