ಏಪ್ರಿಲ್ 10 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಪಡೆಯಬಹುದು – ಆರೋಗ್ಯ ಇಲಾಖೆ

ನವದೆಹಲಿ: ಕೊರೊನಾ ವಿರುದ್ಧ ವ್ಯಾಕ್ಸಿನ್ ಅಭಿಯಾನ ಆರಂಭಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೂಸ್ಟರ್ ಡೋಸ್ ವ್ಯಾಪ್ತಿಯನ್ನು ವಿಸ್ತರಿಸಿದೆ. ಏಪ್ರಿಲ್ 10 ರಿಂದ 18 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಈ ಬಗ್ಗೆ ಇಂದು ಪ್ರಕಟಣೆ ಹೊರಡಿಸಿದ್ದು, ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣಗೊಂಡವರು ಮೂರನೇ ಡೋಸ್ ಪಡೆಯಬಹುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ದಂಪತಿ ಒಟ್ಟಿಗೆ ಮಲಗುವಂತಿಲ್ಲ, ಹಗ್‌-ಕಿಸ್‌ ಮಾಡುವಂತಿಲ್ಲ; ಕೊರೊನಾ ಟಫ್‌ ರೂಲ್ಸ್‌

 

ದೇಶದಾದ್ಯಂತ ಕೇಂದ್ರ ಸರ್ಕಾರ ಸರ್ಕಾರಿ ವ್ಯಾಕ್ಸಿನ್ ಕೇಂದ್ರಗಳ ಮೂಲಕ ಮೊದಲ ಮತ್ತು ಎರಡನೇ ಡೋಸ್ ನೀಡುತ್ತಿದೆ. ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಹೋರಾಟಗಾರರು ಸೇರಿದಂತೆ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸರ್ಕಾರಿ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲಾಗುತ್ತಿದ್ದು ಇದು ಮುಂದುವರಿಯಲಿದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: XE ರೂಪಾಂತರಿ ಮುಂಬೈನಲ್ಲಿ ಪತ್ತೆಯಾಗಿಲ್ಲ: ಮಹಾರಾಷ್ಟ್ರ ಸ್ಪಷ್ಟನೆ

ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ನಾಲ್ಕನೇ ಅಲೆ ಆರಂಭವಾಗಿದ್ದು ಲಾಕ್‍ಡೌನ್ ಮಾಡುವ ಪರಿಸ್ಥಿತಿ ಮತ್ತೆ ನಿರ್ಮಾಣವಾಗುತ್ತಿದೆ. ಈ ಹಿನ್ನಲೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಮೂರನೇ ಡೋಸ್ ನೀಡಲು ಚಿಂತಿಸಿದ್ದು ಮೊದಲು ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ನೀಡಲು ಅವಕಾಶ ನೀಡಿದೆ.

Comments

Leave a Reply

Your email address will not be published. Required fields are marked *