ಮಂಡ್ಯದ ಶಾಲೆಯೊಂದರಲ್ಲಿ ಐವರು ವಿದ್ಯಾರ್ಥಿಗಳಿಗೆ ಕೊರೊನಾ

ಮಂಡ್ಯ: ಮದ್ದೂರು ತಾಲೂಕು ಹಳ್ಳಿಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ 5 ಮಕ್ಕಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಶಾಲೆಗಳಲ್ಲಿ ತೀವ್ರವಾಗಿ ಕೊರೊನಾ ಮಹಾಮಾರಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಜನರಲ್ಲಿ ಆತಂಕ ಮೂಡಿದೆ.

ಶಾಲೆಯಲ್ಲಿ ಸಾಮೂಹಿಕ ಪರೀಕ್ಷೆಯ ವೇಳೆ ಮಕ್ಕಳಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಶಾಲೆಯ 50 ಮಕ್ಕಳಲ್ಲಿ 5 ಮಕ್ಕಳಿಗೆ ಕೊರೊನಾ ಸೋಂಕು ಹರಡಿದ್ದು, ಸೋಂಕಿತ ಮಕ್ಕಳಲ್ಲಿ ಸಣ್ಣ ಪುಟ್ಟ ರೋಗದ ಲಕ್ಷಣವೂ ಕಂಡುಬಂದಿದೆ. ಇದನ್ನೂ ಓದಿ: ದೆಹಲಿ, ಮುಂಬೈನಲ್ಲಿ ಶುರುವಾಯ್ತಾ ಕೊರೊನಾ ಮೂರನೇ ಅಲೆ?

ಮಕ್ಕಳಲ್ಲಿ ಕೊರೊನಾ ದೃಢಪಟ್ಟ ಬಳಿಕ ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿನೀಡಿ ಗ್ರಾಮಸ್ಥರಿಗೆ ಧೈರ್ಯತುಂಬಿ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಲಹೆ ನೀಡಿದ್ದಾರೆ. ಗ್ರಾಮ ಪಂಚಾಯ್ತಿ ಸಿಬ್ಬಂದಿ ಶಾಲೆಯನ್ನು ಸ್ಯಾನಿಟೈಸ್ ಮಾಡಿ, ಸೀಲ್ ಡೌನ್ ಮಾಡಿದ್ದಾರೆ. ಇದನ್ನೂ ಓದಿ: ನೇತ್ರದಾನ ಮಾಡೋದು ರಾಜ್ ಫ್ಯಾಮಿಲಿ ಟ್ರೆಡಿಷನ್ ಆಗಿದೆ: ಡಾ.ಭುಜಂಗ ಶೆಟ್ಟಿ

ಸದ್ಯ ಸೋಂಕಿತ ಮಕ್ಕಳನ್ನು ಅವರವರ ಮನೆಗಳಲ್ಲೇ ಐಸೋಲೇಷನ್ ಮಾಡಲಾಗಿದೆ. ಸೋಂಕಿತ ಮಕ್ಕಳ ಕುಟುಂಬದವರಿಗೂ ಕೊರೊನಾ ಟೆಸ್ಟ್ ಮಾಡಿದ್ದು, ಇಂದು ಸಂಜೆ ರಿಪೋರ್ಟ್ ಬರುವ ಸಾಧ್ಯತೆ ಇದೆ.

Comments

Leave a Reply

Your email address will not be published. Required fields are marked *