ನಾಳೆಯಿಂದ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ವ್ಯಾಕ್ಸಿನ್

ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ.

ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ. ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ ಲಸಿಕಾ ಅಭಿಯಾನ ನಡೆಯುತ್ತಿದೆ. ಇದನ್ನೂ ಓದಿ: ಮಹಿಳೆಯರು ಎಲ್ಲಿ, ಏನು ಬೇಕಾದರೂ ಧರಿಸಬಹುದು, ಆದರೆ…: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಶಶಿಕಾಂತ ಮುನ್ಯಾಳ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಅಧಿಕಾರಿ ಡಾ. ಈಶ್ವರ ಗಡದ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಆಯ್ದ 20 ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತದೆ. ಉಳಿದ ಎಲ್ಲಾ ಮಕ್ಕಳಿಗೆ ಅವರ ಶಾಲೆಗಳು ಹಾಗೂ ನಗರ ಮತ್ತು ಗ್ರಾಮದಲ್ಲಿ ಲಸಿಕಾ ಕೇಂದ್ರಗಳಲ್ಲಿ ನೀಡಲಾಗುವದು ಎಂದು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *