ಪ್ರಧಾನಿ ಮೋದಿ ಭಾಷಣದ ಬಳಿಕ ಮದ್ಯದಂಗಡಿ ತೆರೆಯುವ ಕುರಿತು ನಿರ್ಧಾರ: ಸಚಿವ ನಾಗೇಶ್

– ಓಪನ್ ಮಾಡಲು ಜನರಿಂದ ಸರ್ಕಾರಕ್ಕೆ ಒತ್ತಡ ಇದೆ

ಕೋಲಾರ: ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯುವ ವಿಚಾರವಾಗಿ ಚರ್ಚೆ ನಡೆಸಲಾಗಿದ್ದು, ನಾಳೆ ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದ್ದಾರೆ.

ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮದ್ಯದಂಗಡಿ ತೆರೆಯಲು ಚಿಂತನೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ತೀರ್ಮಾನ ಮಾಡಲಾಗುವುದು. ಕಳ್ಳಬಟ್ಟಿ ಸಾರಾಯಿ ತಡೆಗಟ್ಟಲು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಸರ್ಕಾರದ ಎಂಎಸ್‍ಐಎಲ್ ಓಪನ್ ಮಾಡುವಂತೆ ಸರ್ಕಾರದ ಮೇಲೆ ಜನರ ಒತ್ತಡ ಜಾಸ್ತಿ ಇದೆ ಎಂದರು.

ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಸೋಂಕು ತಡೆಗಟ್ಟುವಲ್ಲಿ ಅನುಸರಿಸಬೇಕಾದ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದರು.

Comments

Leave a Reply

Your email address will not be published. Required fields are marked *