ಮತ್ತೆರಡು ಪಾಸಿಟಿವ್ – ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 13ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆರಡು ಕೊರೊನಾ ಕೇಸ್ ದಾಖಲಾಗಿದೆ. ಇಬ್ಬರು ಬೆಂಗಳೂರಿನವರಾಗಿದ್ದು ಪ್ರತ್ಯೇಕ ನಿಗಾದಲ್ಲಿ ಇಡಲಾಗಿದೆ. ಈ ಕೇಸ್ ಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

56 ವರ್ಷದ ವ್ಯಕ್ತಿ ಮಾರ್ಚ್ 6ರಂದು ಅಮೆರಿಕದಿಂದ ಹಿಂದಿರುಗಿದ್ದರು. 25 ವರ್ಷದ ಮಹಿಳೆ ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿ, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ತಿಳಿಸಿದ್ದಾರೆ.

13 ಕೊರೊನಾ ಪೀಡಿತರ ಪೈಕಿ ಈಗಾಗಲೇ ಮೊದಲ ರೋಗಿಯಾಗಿ ದಾಖಲಾಗಿದ್ದ ಟೆಕ್ಕಿ, ಟೆಕ್ಕಿಯ ಪತ್ನಿ, ಮಗಳು ಗುಣಮುಖರಾಗಿದ್ದಾರೆ. ಕಲಬುರಗಿಯ ವ್ಯಕ್ತಿ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು ರಾಜ್ಯದಲ್ಲಿ 9 ಮಂದಿ ಕೊರೊನಾ ಪೀಡಿತರಿದ್ದು ಬೆಂಗಳೂರಿನಲ್ಲಿ 7 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರೆ ಕಲಬುರಗಿಯಲ್ಲಿ ಇಬ್ಬರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

8 ಮಂದಿ ಯಾರೆಲ್ಲ?
1. ಮೈಂಡ್ ಟ್ರೀ ಕಂಪನಿಯ ಟೆಕ್ಕಿ
2. ಗೂಗಲ್ ಕಂಪನಿಯ ಟೆಕ್ಕಿ
3. ಕೊರೊನಾದಿಂದ ಮೃತಪಟ್ಟ ಕಲಬುರಗಿ ವ್ಯಕ್ತಿಯ ಮಗಳು
4. ಮೈಂಡ್ ಟ್ರೀ ಕಂಪನಿಯ ಟೆಕ್ಕಿ ಜೊತೆ ಪ್ರಯಾಣಿಸಿದ ಸಹೋದ್ಯೋಗಿ
5. ಯುಕೆ ಪ್ರವಾಸದಿಂದ ಹಿಂದಿರುಗಿದ ವಿದ್ಯಾರ್ಥಿನಿ
6. ಕೊರೊನಾದಿಂದ ಮೃತಪಟ್ಟ ಕಲಬುರಗಿ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ವೈದ್ಯ
7. ದುಬೈನಿಂದ ಮರಳಿದ್ದ 67 ವರ್ಷದ ಮಹಿಳೆ
8. ಅಮೆರಿಕದಿಂದ ಮರಳಿದ್ದ 56 ವರ್ಷದ ವ್ಯಕ್ತಿ
9. ಸ್ಪೇನ್ ದೇಶದಿಂದ ಮರಳಿದ್ದ 25 ವರ್ಷದ ಮಹಿಳೆ

Comments

Leave a Reply

Your email address will not be published. Required fields are marked *