ಕೋವಿಡ್‍ನಿಂದ ಭಾರತೀಯರ ಆಯಸ್ಸು 2 ವರ್ಷ ಇಳಿಕೆ

ಮುಂಬೈ: ಕೊರೊನಾ ಮಹಾಮಾರಿ ಸೋಂಕಿನಿಂದಾಗಿ ಭಾರತೀಯರ ಜೀವಿತಾವಧಿಯಲ್ಲಿ ಸರಾಸರಿ 2ವರ್ಷ ಇಳಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ.

ಮುಂಬೈನ ಅಂತರಾಷ್ಟ್ರೀಯ ಜನಸಂಖ್ಯಾ ಶಾಸ್ತ್ರದ ಸಂಸ್ಥೆ(ಐಐಪಿಎಸ್) ವಿಜ್ಞಾನಿಗಳು, ದೇಶದಲ್ಲಾಗುತ್ತಿರುವ ಸಾವಿನ ಪ್ರಮಾಣಕ್ಕೆ ಕೋವಿಡ್ ಹೇಗೆ ಪರೋಕ್ಷವಾಗಿ ಕಾರಣವಾಗಿದೆ ಎಂಬ ಕುರಿತಾಗಿ ಅಂಕಿ ಸಂಖ್ಯೆಗಳ ವಿಶ್ಲೇಷಣೆ ನಡೆಸಿದ್ದಾರೆ.

ವರದಿಯು ಬಿಎಂಸಿ ಪಬ್ಲಿಕ್ ಹೆಲ್ತ್ ಜರ್ನಲ್‍ನಲ್ಲಿ ಪ್ರಕಟವಾಗಿದೆ. ಈ ಪ್ರಕಾರ ದೇಶದ ಮಹಿಳೆಯರು ಮತ್ತು ಪುರುಷರು ಆಯಸ್ಸು ತಲಾ 2 ವರ್ಷಗಳಷ್ಟು ಕಡಿತಗೊಂಡಿದೆ. 2019ರಲ್ಲಿ ಸರಾಸರಿ 69.5 ರಷ್ಟಿದ್ದ ಪುರುಷರ ಜೀವಿತಾವಧಿಯು ಸರಾಸರಿ 67.5ಕ್ಕೆ ಕುಸಿದಿದೆ. ಅದೇ ರೀತಿ ಮಹಿಳೆಯರು ಸರಾಸರಿ ಆಯಸ್ಸು 72 ವರ್ಷದಿಂದ 69.8ಕ್ಕೆ ಕುಸಿದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: 100 ಕೋಟಿ ಲಸಿಕೆ ವಿತರಣೆ – ಅನುಮಾನ ವ್ಯಕ್ತಪಡಿಸಿದ ಸಂಜಯ್ ರಾವತ್

ಕೊರೊನಾ ಮಹಾಮಾರಿಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿತ್ತು. ಕೊರೊನಾ ವಿರುದ್ಧವಾಗಿ ಹೋರಾಡಲು ಭಾರತದಲ್ಲಿಯೇ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಯನ್ನು ಕಂಡು ಹಿಡಿಯಲಾಯಿತ್ತು. ಭಾರತ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆಯ ಸಾಧನೆ ಮಾಡಿದೆ. ಈ ಮೂಲಕ ಚೀನಾ ನಂತರ 100 ಕೋಟಿ ಲಸಿಕೆ ಸಾಧನೆ ಮಾಡಿದ ಎರಡನೇ ದೇಶವಾಗಿ ಭಾರತ ಹೊರಹೊಮ್ಮಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿ, 100 ಕೋಟಿ ಲಸಿಕೆ ಕೇವಲ ಅಂಕಿಯಲ್ಲ, ಇದೊಂದು ಇತಿಹಾಸ ಪುಟದಲ್ಲಿ ದಾಖಲಾದ ಹೊಸ ಅಧ್ಯಾಯ ಎಂದಿದ್ದಾರೆ. ಇದನ್ನೂ ಓದಿ: 100 ಕೋಟಿ ಕೇವಲ ಅಂಕಿಯಲ್ಲ, ಇತಿಹಾಸದಲ್ಲಿ ದಾಖಲಾದ ಹೊಸ ಅಧ್ಯಾಯ: ಮೋದಿ

Comments

Leave a Reply

Your email address will not be published. Required fields are marked *