ಕೋವಿಡ್ 4ನೇ ಅಲೆ: ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಬೆಂಗಳೂರು: ಇತ್ತೀಚೆಗೆ ದೇಶದ ರಾಜಧಾನಿ ದೆಹಲಿ ಸೇರಿದಂತೆ ಇತರೆಡೆ ಕೋವಿಡ್ ಸೋಂಕಿತರ ಸಭೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ಕರ್ನಾಟಕದಲ್ಲಿ ನಾಲ್ಕು ವಾರದ ಬಳಿಕ ಕೊರೊನಾ ನಾಲ್ಕನೇ ಅಲೆಯ ಆರಂಭದ ಬಗ್ಗೆ ತಜ್ಞರ ತಂಡ ಮುನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

COVID-19

ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಮಧ್ಯಾಹ್ನ ಸಭೆ ನಡೆಯಲಿದೆ. ಸಭೆಯಲ್ಲಿ ಕಂದಾಯ ಸಚಿವ ಅಶೋಕ್, ಆರೋಗ್ಯ ಸಚಿವ ಡಾ. ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಸದಸ್ಯರು ಭಾಗಿಯಾಗಲಿದ್ದಾರೆ.

ಸಭೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬುಧವಾರದಿಂದ ರಾಜ್ಯದಲ್ಲಿ ಕಟ್ಟುನಿಟ್ಟಿನ ಕೋವಿಡ್ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.

corona

ಸಭೆಯಲ್ಲಿ ತಜ್ಞರು ಏನು ಸಲಹೆ ಕೋಡ್ತಾರೆ?: ಐಐಟಿ ಕಾನ್ಪುರದ ವರದಿಯ ಪ್ರಕಾರ ಜೂನ್‍ನಲ್ಲಿ ಕೊರೊನಾ ನಾಲ್ಕನೇ ಅಲೆಯ ಆತಂಕ ಶುರುವಾಗಲಿದೆ. ಕರ್ನಾಟಕದ ನೆರೆ ರಾಜ್ಯದಲ್ಲಿ ಪ್ರಕರಣ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ನಿಧಾನಕ್ಕೆ ಕೇಸ್‍ಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದು ಕರ್ನಾಟಕಕ್ಕೆ ಎಚ್ಚರಿಕೆ ಅಲಾರಂ ಆಗಿದೆ. ಇದನ್ನೂ ಓದಿ: ಗೋಡ್ಸೆ ಸಿದ್ಧಾಂತವನ್ನು ಮೋದಿ ಬೆಂಬಲಿಸುತ್ತಿದ್ದಾರೆ: ಕೆಟಿಆರ್

ಮಾಸ್ಕ್ ಬಳಸೋದನ್ನು ಜನ ಮರೆತಿದ್ದಾರೆ. ಹೀಗಾಗಿ ಮಾಸ್ಕ್ ಜಾಗೃತಿ ಬಗ್ಗೆ ಸರ್ಕಾರಕ್ಕೆ ತಜ್ಞರ ತಂಡ ಸಲಹೆ ಕೊಡಲಿದೆ. ಸರ್ಕಾರಿ ಆಸ್ಪತ್ರೆಗಳು ಸನ್ನದ್ಧವಾಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವೃ ನಿಗಾಕ್ಕೆ ಸೂಚನೆ ನೀಡಲಿದೆ.

ಯಾವ ದೇಶದಲ್ಲಿ ಕೊರೊನಾ ಹೆಚ್ಚಾಗಿದ್ಯೋ ಆ ದೇಶದಿಂದ ಬರುವ ಪ್ರಯಾಣಿಕರ ಬಗ್ಗೆ ಏರ್‌ಪೋರ್ಟ್‍ನಲ್ಲಿ ನಿಗಾ ಇಡಬೇಕು. ಟೆಸ್ಟಿಂಗ್ ನಿಧಾನಕ್ಕೆ ಹೆಚ್ಚಳ ಮಾಡುವಂತೆ ತಜ್ಞರಿಂದ ಸಲಹೆ ನೀಡುವ ಸಾಧ್ಯತೆಯಿದೆ. ಓಮಿಕ್ರಾನ್ ಉಪತಳಿ ಬೇರೆ ರಾಜ್ಯದಲ್ಲಿ ಪತ್ತೆಯಾಗಿರುವುದರಿಂದ ಕರ್ನಾಟಕದಲ್ಲಿ ಜೀನೋಮ್ ಸೀಕ್ವೆನ್ಸಿಂಗ್‍ಗೆ ಹೆಚ್ಚಳಕ್ಕೆ ಸೂಚನೆ ಸಾಧ್ಯತೆಯಿದೆ. ಇದನ್ನೂ ಓದಿ: ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಅಭಿಯಾನ

Comments

Leave a Reply

Your email address will not be published. Required fields are marked *