ಗೋವು ತಲೆ ರಸ್ತೆ ಬದಿ ಎಸೆದ ಪ್ರಕರಣ: ಆರೋಪಿಗಳ ಬಂಧನಕ್ಕೆ ಕಾಂಗ್ರೆಸ್ ಮನವಿ

ಮಂಗಳೂರು: ಗೋವಿನ ತಲೆಯನ್ನು ರಸ್ತೆ ಬದಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಭೇಟಿ ಮನವಿ ಸಲ್ಲಿಸಿದೆ.

ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೀರ್ತಿ ನಗರದಲ್ಲಿ ದುಷ್ಕರ್ಮಿಗಳು ಗೋವಿನ ರುಂಡವನ್ನು ಗೋಣಿ ಚೀಲದಲ್ಲಿ ಕಟ್ಟಿ ರಸ್ತೆ ಬದಿಯಲ್ಲಿ ಬಿಸಾಡಿತ್ತು. ಇದರಿಂದಾಗಿ ಸಮಾಜದಲ್ಲಿ ಶಾಂತಿ ಕೆಡಿಸುವ ಪ್ರಯತ್ನ ಮಾಡಲಾಗಿದೆ. ಅಲ್ಲದೆ, ಪರಿಸರದಲ್ಲಿ ನಿರಂತರ ಗೋಕಳ್ಳತನ ನಡೆಯುತ್ತಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಇದನ್ನೂ ಓದಿ: ನಾನು ಮಾಜಿ ಪ್ರಧಾನಿ ಈಗ ಮೇಕೆದಾಟು ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಎಚ್‍ಡಿಡಿ

ಈ ಸಂದರ್ಭದಲ್ಲಿ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಲೇರಿಯನ್ ಸಿಕ್ವೇರಾ, ರಾಜೇಶ್ ಕಡಲೆಕೆರೆ, ಪುರಂದರ ಮತ್ತಿತರರಿದ್ದರು.

Comments

Leave a Reply

Your email address will not be published. Required fields are marked *