ಎಕ್ಸ್‌ಪ್ರೆಸ್‌ ವೇನಲ್ಲಿ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸಿ ಹುಚ್ಚಾಟ – ಚಾಲಕ ಅರೆಸ್ಟ್

– ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಮಂಡ್ಯ: ಬೆಂಗಳೂರು-ಮೈಸೂರು (Bengaluru-Mysuru)  ಎಕ್ಸ್‌ಪ್ರೆಸ್‌ ವೇನಲ್ಲಿ (Expressway)  ಹುಚ್ಚಾಟ ನಡೆಸಿದ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಅವರನ್ನು ಟ್ಯಾಗ್ ಮಾಡಿ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಎಲ್ಲಾ ಕ್ರೀಡಾಕೂಟಗಳ ಬಹಿಷ್ಕಾರದ ಎಚ್ಚರಿಕೆ – ಬೇಡಿಕೆ ಈಡೇರಿಕೆಗಾಗಿ ದೈಹಿಕ ಶಿಕ್ಷಕರ ಪ್ರತಿಭಟನೆ

ವಿಡಿಯೋ ವೈರಲ್ ಆಗುತ್ತಿದ್ದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೋಲೀಸರು ಕಾರ್ಯಾಚರಣೆ ನಡೆಸಿ ಚಾಲಕ ಪ್ರಶಾಂತ್ ಹಾಗೂ ಸಹ ಚಾಲಕ ನೀಲಪ್ಪನನ್ನು ಬಂಧಿಸಿ, ಸಂಚಾರ ನಿಯಮ ಉಲ್ಲಂಘನೆ ಆರೋಪದಡಿ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ಸಿಂಗ್‍ಗೆ ಹಿನ್ನಡೆ – ಪ್ರಕರಣ ರದ್ದು ಮಾಡಲು ನಿರಾಕರಿಸಿದ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಓಡಿಸಿದ್ದಕ್ಕೆ ಬಸ್ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಡಿಗ್ರಿ ಬಳಿಕ ಮುಂದೇನು? – ಪಬ್ಲಿಕ್ ಟಿವಿ ವಿದ್ಯಾಮಂದಿರಕ್ಕೆ ಬನ್ನಿ