ಲವ್ವರ್‌ ಭೇಟಿ ಮಾಡಲು ಗ್ರಾಮದ ಕರೆಂಟ್ ಕಟ್ ಮಾಡುತ್ತಿದ್ದ ಲೈನ್‌ಮ್ಯಾನ್

ಪಾಟ್ನಾ: ಪ್ರೇಮಿಗಳು ಪ್ರೀತಿಯಲ್ಲಿದ್ದಾಗ ಎಲ್ಲ ರೀತಿಯ ಹುಚ್ಚುತನದ ಕೆಲಸಗಳನ್ನು ಮಾಡುತ್ತಾರೆ. ಅವರ ಕೆಲಸಗಳು ಬೇರೆಯವರಿಗೆ ತೊಂದರೆ ಕೊಡುತ್ತೆ ಎಂಬುದನ್ನು ಮರೆತುಬಿಡುತ್ತಾರೆ. ಅದೇ ರೀತಿ ಲೈನ್‌ಮ್ಯಾನ್ ಒಬ್ಬ ಕತ್ತಲೆಯ ನೆಪದಲ್ಲಿ ತನ್ನ ಗೆಳತಿಯನ್ನು ಭೇಟಿಯಾಗಲು ಇಡೀ ಗ್ರಾಮದ ಕರೆಂಟ್ ಆಗಾಗ್ಗೆ ಕಡಿತಗೊಳಿಸುತ್ತಿದ್ದ ವಿಲಕ್ಷಣ ಘಟನೆಯೊಂದು ಬಿಹಾರದ ಪುರ್ನಿಯಾದಲ್ಲಿ ವರದಿಯಾದೆ.

ಪುರ್ನಿಯಾ ಜಿಲ್ಲೆಯ ಗಣೇಶ್‍ಪುರ ಗ್ರಾಮದ ಜನರು ಅಕ್ಕಪಕ್ಕದ ಹಳ್ಳಿಗಳಲ್ಲಿ ಯಾವುದೇ ರೀತಿಯ ಕರೆಂಟ್ ಸಮಸ್ಯೆಯಾಗುತ್ತಿಲ್ಲ. ಆದರೆ ನಮ್ಮ ಹಳ್ಳಿಯಲ್ಲಿ ಮಾತ್ರ ಯಾಕೆ ಈ ರೀತಿಯಾಗುತ್ತಿದೆ ಎಂದು ಯೋಚಿಸುತ್ತಿದ್ದರು. ತಿಂಗಳಲ್ಲಿ ಒಮ್ಮೆಯಾದರೂ ಈ ಸಮಸ್ಯೆ ಕಾಣಿಸಿಕೊಳ್ಳುವುದು ಎಲ್ಲರ ಅನುಮಾನಕ್ಕೆ ಕಾರಣವಾಗಿ ಇದಕ್ಕೆ ನಿಖರವಾದ ಕಾರಣ ಹುಡುಕಲು ನಿರ್ಧರಿಸಿದರು. ಇದನ್ನೂ ಓದಿ: ಥೈಲ್ಯಾಂಡ್ ಪೂಲ್‌ನಲ್ಲಿ ಮೈಮರೆತ ಮಂದಿರಾ ಬೇಡಿ

ಈ ಕುರಿತು ಪರಿಶೀಲಿಸಿದ ನಂತರ, ಎಲೆಕ್ಟ್ರಿಷಿಯನ್ ತನ್ನ ಗೆಳತಿಯನ್ನು ಕತ್ತಲೆಯಲ್ಲಿ ಭೇಟಿಯಾಗಲು ಹಳ್ಳಿಯ ವಿದ್ಯುತ್ ಸರಬರಾಜನ್ನು ಕಡಿತಗೊಳಿಸುತ್ತಿರುವುದು ತಿಳಿದು ಗ್ರಾಮಸ್ಥರು ಆಘಾತಕ್ಕೊಳಗಾದರು. ಲೈನ್‌ಮ್ಯಾನ್ ನನ್ನು ಹಿಡಿಯಲು ನಿರ್ಧರಿಸಿದ ಗ್ರಾಮಸ್ಥರು ಒಂದು ಯೋಚನೆ ರೂಪಿಸಿದರು.

ಗ್ರಾಮಸ್ಥರು ಪ್ಲಾನ್ ಮಾಡಿದ ರೀತಿಯಲ್ಲಿಯೇ ಲೈನ್‌ಮ್ಯಾನ್ ಬಂದಿದ್ದು, ಎಲ್ಲರೂ ಕೋಪಗೊಂಡು ಅವನನ್ನು ಥಳಿಸಿದ್ದಾರೆ. ನಂತರ ಅವರು ಲೈನ್‌ಮ್ಯಾನ್  ಗ್ರಾಮದಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಗ್ರಾಮಸ್ಥರು ಗ್ರಾಮದ ಮುಖ್ಯಸ್ಥ ಹಾಗೂ ಇತರ ಗ್ರಾಮಸಭೆ ಸದಸ್ಯರ ಸಮ್ಮುಖದಲ್ಲಿ ಆತ ತನ್ನ ಪ್ರೇಯಸಿಯನ್ನು ಮದುವೆಯಾಗುವಂತೆ ತೀರ್ಮಾನ ಮಾಡಿದರು.

ಗ್ರಾಮದ ಮುಖ್ಯಸ್ಥ ಮತ್ತು ಇತರ ಗ್ರಾಮ ಕೌನ್ಸಿಲ್ ಸದಸ್ಯರ ಸಮ್ಮುಖದಲ್ಲಿ ಲೈನ್‌ಮ್ಯಾನ್ ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಿದ್ದಾನೆ ಎಂದು ಗ್ರಾಮಸ್ಥ ಮಾರಾರ್ ರಾಮ್ ಮುರ್ಮು ಗುರುವಾರ ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದರು. ಇದನ್ನೂ ಓದಿ: ಎರಡೇ ದಿನದಲ್ಲಿ ಸಿಕ್ಸ್ ಪ್ಯಾಕ್ – ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು 

ಗ್ರಾಮಸ್ಥರು ಲೈನ್‌ಮ್ಯಾನ್ ವಿರುದ್ಧ ಯಾವುದೇ ಪೊಲೀಸ್ ಕೇಸ್ ದಾಖಲಿಸಿಲ್ಲ. ದೂರು ಬಂದರೆ ಮಾತ್ರ ಕ್ರಮಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *