ಕ್ರಿಸ್ಟಿಯಾನೊ ರೊನಾಲ್ಡೊ ಮಾಲೀಕತ್ವದ 13 ಕೋಟಿ ಮೌಲ್ಯದ ಕಾರು ಅಪಘಾತ

ಸ್ಪೇನ್: ಖ್ಯಾತ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಮಾಲೀಕತ್ವದ 13.3 ಕೋಟಿ ಮೌಲ್ಯದ ಬುಗಾಟಿ ವೆರಾನ್ ಕಾರು ಅಪಘಾತಕ್ಕೀಡಾಗಿದೆ.

ಸ್ಪ್ಯಾನಿಷ್ ನಗರದ ಮಜೋರ್ಕಾದಲ್ಲಿ ಮನೆಯೊಂದರ ಪ್ರವೇಶದ್ವಾರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ರೊನಾಲ್ಡೊ ಅವರ ಸಿಬ್ಬಂದಿಯೊಬ್ಬರು ಕಾರನ್ನು ಚಲಾಯಿಸುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದ್ದು, ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಚಿನ್ನದ ಹುಡುಗ ನೀರಜ್ ಚೋಪ್ರಾ ಕೊರಳಿಗೆ ಮತ್ತೊಂದು ಚಿನ್ನ

ದುಬಾರಿ ಬೆಲೆಯ ಸ್ಪೋರ್ಟ್ಸ್ ಕಾರುಗಳನ್ನು ಹೊಂದಿರುವ ಆಟಗಾರರ ಪೈಕಿ ರೊನಾಲ್ಡೊ ಸಹ ಒಬ್ಬರಾಗಿದ್ದಾರೆ. ಪ್ರಸ್ತುತ ಅವರು ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಫುಟ್‌ಬಾಲ್ ಆಟಗಾರರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಫೋಕ್ಸ್ ವ್ಯಾಗನ್ ಕಂಪನಿಯ ಬುಗಾಟಿ ವೆರಾನ್ ಕಾರು ಪ್ರಪಂಚದಲ್ಲಿರುವ ದುಬಾರಿ ಕಾರುಗಳಲ್ಲಿ ಒಂದಾಗಿದೆ.

Live Tv

Comments

Leave a Reply

Your email address will not be published. Required fields are marked *