ಕಾರವಾರ: ನದಿ ದಂಡೆಯ ಮೇಲೆ ಮೀನು ಹಿಡಿಯಲು ಗಾಳಹಾಕಿ ಕುಳಿತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿ ದಡದಲ್ಲಿ ಇಂದು ಸಂಜೆ ನಡೆದಿದೆ.

ಮೋಹಿನ್ ಮೆಹಬೂಬ್ (15) ಮೊಸಳೆ ಪಾಲಾದ ಬಾಲಕನಾಗಿದ್ದು, ಈತ ಮೀನು ಹಿಡಿಯಲು ದಾಂಡೇಲಿ-ಹಳಿಯಾಳ ರಸ್ತೆಯ ಕಾಳಿ ನದಿ ದಡದಲ್ಲಿ ಕುಳಿತಿದ್ದ. ಈ ವೇಳೆ ಮೊಸಳೆ ದಾಳಿಮಾಡಿದ್ದು ಈತನನ್ನು ಹೊತ್ತೊಯ್ದಿದೆ. ಇದನ್ನೂ ಓದಿ: ಕಾಳಿ ನದಿಯಿಂದ ಗ್ರಾಮಕ್ಕೆ ಬಂತು ಮೊಸಳೆ – ಆತಂಕದಲ್ಲಿ ಗ್ರಾಮಸ್ಥರು

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಶೋಧ ಕಾರ್ಯ ಮುಂದುವರೆಸಿದ್ದು, ಸೂಪಾ ಜಲಶಾಯದಿಂದ ಹರಿದುಬರುತ್ತಿರುವ ನೀರನ್ನು ಸಹ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಮೆಡಿಕಲ್‍ನಲ್ಲಿ ಗ್ರೈಪ್ ವಾಟರ್ ಬದಲು ಪಾಯಿಸನ್ ಕೊಟ್ರು

Leave a Reply