ದೇಶದ ಕರೆಗೆ ಹನಿಮೂನ್‌ ಮೊಟಕುಗೊಳಿಸಿ ಸೇವೆಗೆ ತೆರಳಿದ ಯೋಧ

– ಮೇ 1 ರಂದು ಮದುವೆಯಾಗಿ ಊಟಿಗೆ ಹನಿಮೂನ್‌ಗೆ ಹೋಗಿದ್ದ ಯೋಧ ಜಯಂತ್‌ ದಂಪತಿ

ಕಾರವಾರ: ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತ ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆ ನಡೆಸಿದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಿದೆ. ಈ ಹೊತ್ತಿನಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯೋಧನೊಬ್ಬ ದೇಶದ ಕರೆಗೆ ಹನಿಮೂನ್‌ ಮೊಟಕಗೊಳಿಸಿ ಸೇವೆಗೆ ತೆರಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಯೋಧ ಜಯಂತ್ ಹನಿಮೂನ್ ರದ್ದುಪಡಿಸಿ ದೇಶ ಸೇವೆಗೆ ಕರ್ತವ್ಯಕ್ಕೆ ಹೊರಟಿದ್ದಾರೆ. ಮದುವೆಯಾಗಿ 9 ದಿನಕ್ಕೆ ಪತ್ನಿಯನ್ನು ಬಿಟ್ಟು ಯುದ್ಧಕ್ಕಾಗಿ ಛತ್ತೀಸಗಢದ ತನ್ನ ಬೆಟಾಲಿಯನ್‌ಗೆ ತೆರಳಿದ್ದಾರೆ. ಇದನ್ನೂ ಓದಿ: ಕಾಶ್ಮೀರ ಗಡಿಯಲ್ಲಿನ ಪಾಕ್ ಉಗ್ರರ ನೆಲೆ ಉಡೀಸ್ – ವೀಡಿಯೋ ಬಿಡುಗಡೆ ಮಾಡಿದ ಸೇನೆ

ಮೇ 1 ರಂದು ಮದುವೆಯಾಗಿ ಜಯಂತ್‌ ದಂಪತಿ ಊಟಿಗೆ ಹನಿಮೂನ್‌ಗೆ ತೆರಳಿದ್ದರು. ಮೈಸೂರಿಗೆ ತೆರಳಿದ್ದ ಸಂದರ್ಭದಲ್ಲಿ ಸೈನ್ಯದಿಂದ ಕರೆ ಬಂದಿತು. ಒಂದು ಕರೆಗೆ ಹನಿಮೂನ್ ಮೊಟಕುಗೊಳಿಸಿ ದೇಶಸೇವೆಗೆ ಯೋಧ ಹಾಜರಾಗಿದ್ದಾರೆ.

ಸಿಆರ್‌ಪಿಎಫ್‌ನಲ್ಲಿ (CRPF) ಛತ್ತೀಸಗಢನಲ್ಲಿ ಜಯಂತ್‌ ಸೇವೆ ಸಲ್ಲಿಸುತ್ತಿದ್ದಾರೆ. ಯೋಧನಿಗೆ ಸನ್ಮಾನ ಮಾಡಿ, ಗೆದ್ದು ಬಾ ಎಂದು ಹಾರೈಸಿ ಸಿದ್ದಾಪುರದ ಜನತೆ ಕಳುಹಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಪೋರ್ಟ್‌ ಧ್ವಂಸ ಮಾಡಿದ್ದೇವೆ – ಮತ್ತೆ ಪಾಕ್‌ ಫುಲ್‌ ಟ್ರೋಲ್‌