ಬೆಳಗಾವಿ: ಹುಕ್ಕೇರಿ (Hukeeri) ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ರಮೇಶ್ ಕತ್ತಿ (Ramesh Katti) ಬಣ ಇತಿಹಾಸ ನಿರ್ಮಿಸಿದೆ. ಒಟ್ಟು 15 ಜನ ನಿರ್ದೇಶಕರ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ 15ಕ್ಕೆ 15 ಕ್ಷೇತ್ರಗಳನ್ನ ರಮೇಶ್ ಕತ್ತಿ ಬಣ ಗೆದ್ದು ಬೀಗಿದೆ.
ಕಳೆದ ಒಂದು ತಿಂಗಳಿನಿಂದ ಹುಕ್ಕೇರಿಯಲ್ಲೇಬಿಟ್ಟಿದ್ದ ಸತೀಶ್ ಜಾರಕಿಹೊಳಿ (Satish Jarkiholi) ಕುಟುಂಬಕ್ಕೆ ಭಾರಿ ಮುಖಭಂಗವಾಗಿದೆ. ಹುಕ್ಕೇರಿ ಪಟ್ಟಣದ ಬಾಪೂಜಿ ಕಾಲೇಜು ಬಳಿ ಕತ್ತಿ ಬೆಂಬಲಿಗರು ಸತೀಶ್ ಜಾರಕಿಹೊಳಿ ಬೆಂಬಗಲಿಗರು ಪ್ರಯಾಣಿಸುತ್ತಿದ್ದ ಕಾರಿಗೆ ಕಲ್ಲು ಹೊಡೆದಿದ್ದಾರೆ ಎಂದ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಮತ್ತೆ ಹೊಸ ನಾಟಕ- ಕಪ್ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ
ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ನೇತೃತ್ವದ ಪುನಶ್ಚೇತನ ಪ್ಯಾನೆಲ್ ಭರ್ಜರಿ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಠ್ಠಲ ಹಲಗೇಕರ್ ನೇತೃತ್ವದ ಪ್ಯಾನೆಲ್‌ನಿಂದ ಸ್ಫರ್ಧಿಸಿದ್ದ 12ಕ್ಕೂ ಹೆಚ್ಚು ಸದಸ್ಯರು ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಮದ್ದೂರು ಕಲ್ಲು ತೂರಾಟಕ್ಕೆ ಟ್ವಿಸ್ಟ್ – ಟಾರ್ಗೆಟ್ ಮಾಡಿದ್ದೇ ಒಂದು, ಕಲ್ಲು ತೂರಿದ್ದೇ ಮತ್ತೊಂದು ಗಣೇಶನ ಮೇಲೆ
ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾರ್ಖಾನೆಯ ಎದುರು ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.
