ಅಂಡಮಾನ್ – ನಿಕೋಬಾರ್ ದ್ವೀಪಕ್ಕೆ ಅಪ್ಪಳಿಸಲಿದೆ ಚಂಡಮಾರುತ: ಐಎಂಡಿ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ನೌಕಾಯಾನ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ಮಾರ್ಚ್ 21ರಂದು ಚಂಡಮಾರುತ ದ್ವೀಪಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತುರ್ತು ಹಾಗೂ ರಕ್ಷಣಾ ಕಾರ್ಯಗಳ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ರಕ್ಷಣಾ ಕಾರ್ಯಕ್ಕಾಗಿ ಸೇನೆ, ವಾಯುಪಡೆ ಹಾಗೂ ನೌಕಾಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಎನ್‌ಡಿಆರ್‌ಎಫ್‌ನ ಒಂದು ತುಕಡಿ ಈಗಾಗಲೇ ಪೋರ್ಟ್ಬ್ಲೇರ್‌ನಲ್ಲಿ ಠಿಕಾಣಿ ಹೂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಮಾರಕ ಟಿಕ್ ವೈರಸ್ ಪತ್ತೆ – ಒಮ್ಮೆ ಕಚ್ಚಿದರೆ ಸಾವು ಖಚಿತ

ವರ್ಷದ ಮೊದಲ ಚಂಡಮಾರುತ `ಅಸಾನಿ’ ಮಾರ್ಚ್ 21 ರಂದು ಮಧ್ಯ ಬಂಗಾಳ ಕೊಲ್ಲಿಯಲ್ಲಿ ಆರಂಭವಾಗುವ ಸಾಧ್ಯತೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಚಂಡಮಾರುತವು ಭಾರತದ ಕರಾವಳಿಯನ್ನು ದಾಟುವ ಸಾಧ್ಯತೆಯಿಲ್ಲದಿದ್ದರೂ, ಭಾರೀ ಮಳೆ ಮತ್ತು ಬಲವಾದ ಗಾಳಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಅಪ್ಪಳಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಅಂಡಮಾನ್‌ಗೆ ಅಪ್ಪಳಿಸಿ ನಂತರ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಕಡೆಗೆ ಚಲಿಸಲಿದೆ ಎಂದು ಮುನ್ಸೂಚನೆ ನಿಡಿದೆ. ಇದನ್ನೂ ಓದಿ: ಮಿಂಚುಳ್ಳಿ ಲೋಕದಲ್ಲೊಂದು ಪಯಣ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಾರ್ಚ್ 16ರಿಂದ 20ರ ವರೆಗೆ ಮಳೆಯ ಆರ್ಭಟ ಉಂಟಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಈ ಹಿಂದೆಯೇ ಮುನ್ಸೂಚನೆ ನೀಡಿತ್ತು. ಅಂತೆಯೇ ಮಾರ್ಚ್ 19ರಂದು ಧಾರಾಕಾರ ಮಳೆಯಾಗಿ ಸಾಕಷ್ಟು ಹಾನಿಯುಂಟುಮಾಡಿದೆ. ಮಾರ್ಚ್ 20ರಂದು ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹೇಳಿದೆ.

Comments

Leave a Reply

Your email address will not be published. Required fields are marked *