ಡಿಕೆಶಿ ಹಸ್ತಕ್ಷೇಪ ಮುಂದುವರಿಸಿದ್ರೆ ಬಿಜೆಪಿ ಸೇರುತ್ತೇವೆ- 13 ಮಂದಿ ಕೈ ಶಾಸಕರಿಂದ ಬೆದರಿಕೆ

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಸ್ಫೋಟಕ ಬಂಡಾಯದ ಬೆಳವಣಿಗೆಗಳು ನಡೆಯುತ್ತಿದ್ದು, 13 ಮಂದಿ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯುವ ಬೆದರಿಕೆಯನ್ನು ಒಡ್ಡಿದ್ದಾರೆ.

ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಸಂಘರ್ಷದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಅವರ ಹಸ್ತಕ್ಷೇಪ ಹೀಗೆ ಮುಂದುವರಿದ್ರೆ ನಾವು ಬಿಜೆಪಿಗೆ ಹೋಗುತ್ತೇವೆ ಎಂದು 13 ಮಂದಿ ಕಾಂಗ್ರೆಸ್ ಶಾಸಕರು ಬೆದರಿಕೆ ಒಡ್ಡಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಕೈ ಹೈಕಮಾಂಡ್‍ಗೆ ತಲೆನೋವಾಯ್ತು ಬೆಳಗಾವಿ ಸಂಘರ್ಷ- ಸದ್ಯಕ್ಕೆ ಸುಮ್ಮನಿರಿ ಅಂದ್ರು ವೇಣುಗೋಪಾಲ್

ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಚಾರವಾಗಿ ಜಾರಕಿಹೊಳಿ ಬ್ರದರ್ಸ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ ಭುಗಿಲೆದಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನಾಯಕರಲ್ಲಿ ಭಿನ್ನಾಭಿಪ್ರಾಯ ಬಂದಿರುವ ಕುರಿತು ಶನಿವಾರ ಇಡೀ ದಿನ ವೇಣುಗೋಪಾಲ್ ಅವರು ಸಂಧಾನ ಮಾಡಿಸಲು ಚರ್ಚೆ ನಡೆಸಲಾಗಿತ್ತು. ಆದರೆ ಯಾವುದೇ ರೀತಿಯ ಪ್ರಯೋಜನವೂ ಆಗಿರಲಿಲ್ಲ.

ಈ ನಡುವೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೆಬ್ಬಾಳ್ಕರ್ ಪರ ಡಿ.ಕೆ ಶಿವಕುಮಾರ್ ನಿಂತಿದ್ದು, ಶನಿವಾರ ಬೆಳಗಾವಿಯಲ್ಲಿ ಕಾಂಗ್ರೆಸ್ ಸಭೆಯಲ್ಲೂ ಪ್ರತ್ಯಕ್ಷರಾಗಿದ್ದರು. ಇದರಿಂದ ಕೋಪಗೊಂಡ ಕಾಂಗ್ರೆಸ್ ಶಾಸಕರು ಇದೇ ರೀತಿ ಹಸ್ತಕ್ಷೇಪ ಮುಂದುವರಿಸಿದ್ರೆ, ಪಕ್ಷ ತೊರೆಯುತ್ತೇವೆ ಎಂದಿದ್ದಾರೆ ಅಂತ ತಿಳಿದು ಬಂದಿದೆ. ಸದ್ಯ ಈ ಭಿನ್ನಮತ ಶಮನ ಹೊಣೆಗಾರಿಕೆಯನ್ನು ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ವಹಿಸಿದೆ. ಆದ್ದರಿಂದ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ.

ಜಿಲ್ಲೆ ರಾಜಕೀಯದಲ್ಲಿ ಹೆಬ್ಬಾಳ್ಕರ್ ಹಸ್ತಕ್ಷೇಪ ಜಾಸ್ತಿಯಾಗುತ್ತಿದೆ. ಅಷ್ಟೇ ಅಲ್ಲದೇ ಮುಂದೆ ತಮ್ಮನ್ನು ಹಿಂದಿಕ್ಕಬಹುದು ಎನ್ನುವ ಭೀತಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊರಳಿ ಅವರಿಗೆ ಎದುರಾಗಿದೆ. ಹೀಗಾಗಿ ಬದ್ಧ ವೈರಿಗಳಾಗಿದ್ದ ಜಾರಕಿಹೊಳಿ ಸಹೋದರರು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಲ್ಲಿ ದೂರು ನೀಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *