ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಿಢೀರ್ ರಾಜಿನಾಮೆ

ಮಂಗಳೂರು: ದಕ್ಷಿಣ ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ದಿಢೀರ್ ರಾಜಿನಾಮೆ ನೀಡಿದ್ದಾರೆ. ಆಗಸ್ಟ್ 3ರಿಂದ ರಜೆಯಲ್ಲಿ ತೆರಳಿರುವ ಜಿಲ್ಲಾಧಿಕಾರಿ ಸೆಂಥಿಲ್ ಅವರು ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಉತ್ತಮ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಡಿಸಿ ಸಸಿಕಾಂತ್ ಸೆಂಥಿಲ್ ಅವರ ದಿಢೀರ್ ರಾಜೀನಾಮೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದೆ ಇಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವುದು ನೈತಿಕವೆಂದು ನನಗೆ ಅನಿಸುತ್ತಿಲ್ಲ. ಸಂವಿಧಾನದ ಮೂಲ ಆಶಯಗಳು ಕಾಣೆಯಾಗುತ್ತಿದೆ. ಭವಿಷ್ಯದಲ್ಲಿ ಮತ್ತಷ್ಟು ಅಡೆತಡೆ ಬರುವ ಸಾಧ್ಯತೆಯಿದೆ. ಜೊತೆಗೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸಸಿಕಾಂತ್ ತಿಳಿಸಿದ್ದಾರೆ.

2009ರ ಬ್ಯಾಚಿನ ಈ ಅಧಿಕಾರಿ 2017 ಅಕ್ಟೋಬರ್ ತಿಂಗಳಿಂದ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಸಸಿಕಾಂತ್ ಅವರು ಕೆಲಸ ಮಾಡಿದ್ದರು.

Comments

Leave a Reply

Your email address will not be published. Required fields are marked *