ಭಗವದ್ಗೀತೆಯನ್ನು ಸುಟ್ಟು ದಲಿತ ಸಂಘಟನೆಗಳಿಂದ ಪ್ರತಿಭಟನೆ

ಹುಬ್ಬಳ್ಳಿ: ಇತ್ತೀಚೆಗೆ ದೆಹಲಿಯಲ್ಲಿ ಸಂವಿಧಾನ ಪ್ರತಿಗಳನ್ನು ಸುಟ್ಟು ಹಾಕಿದ್ದಕ್ಕೆ ಪ್ರತಿಕಾರವಾಗಿ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡು ಬೀದಿಯಲ್ಲಿ ಭಗವದ್ಗೀತೆ ಪ್ರತಿಗಳನ್ನು ಸುಡುವ ಮೂಲಕ ದಲಿತ ಸಂಘಟನೆಗಳು ಆಕ್ರೋಶ ಹೊರಹಾಕಿವೆ.

ಪ್ರತಿಭಟನೆಯಲ್ಲಿ ಹುಬ್ಬಳ್ಳಿ-ಧಾರವಾಡ ಸಂವಿಧಾನ ಉಳಿಸಿ ಹೋರಾಟ ವೇದಿಕೆ ಹಾಗೂ ವಿವಿಧ ದಲಿತ ಸಂಘಟನೆಗಳು ಭಾಗವಹಿಸಿದ್ದವು. ಚೆನ್ನಮ್ಮ ವೃತ್ತದಲ್ಲಿ ಸೇರಿದ್ದ ಪ್ರತಿಭಟನಾಕಾರರು, ಭಗವದ್ಗೀತೆ ಪ್ರತಿಗಳಿಗೆ ಬೆಂಕಿ ಹಚ್ಚಿದರು.

ನೆಹರೂ ಮೈದಾನದ ಬಳಿಯ ಅಂಬೇಡ್ಕರ್ ಭವನದಿಂದ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ, ಬಳಿಕ ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದರು. ಅಲ್ಲಿ ಕೆಲ ಹೊತ್ತು ದಲಿತ ಗೀತೆ ಹಾಡಿ, ಸಂವಿಧಾನ ಸುಟ್ಟು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತ ಉಂಟಾಗಿ, ಸವಾರರು ಹಾಗೂ ಚಾಲಕರು ಪರದಾಡುವಂತಾಯಿತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *