ಡ್ರಾಪ್‌ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಡ್ಯಾನ್ಸ್‌ ಕೊರಿಯೋಗ್ರಾಫರ್‌ ಅರೆಸ್ಟ್‌

ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ (Sexual Harassment) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಆಡುಗೋಡಿಯಲ್ಲಿ ಬಂಧಿಸಿದ್ದಾರೆ.

ತಮಿಳುನಾಡು ಮೂಲದ ಮುಖೇಶ್ವರನ್ ಬಂಧಿತ ಆರೋಪಿ. ಸಂತ್ರಸ್ತ ಯುವತಿಗೆ ಡ್ರಾಪ್ ನೀಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಮುಖೇಶ್ವರನ್‌ ಪರಾರಿಯಾಗಿದ್ದ.

ಆರೋಪಿ ಆಡುಗೋಡಿಯ ಚಂದ್ರಪ್ಪನಗರದಲ್ಲಿ ವಾಸವಾಗಿದ್ದ. ಬೈಕ್ ನಂಬರ್ ಅಧಾರಿಸಿ ಆರೋಪಿಯನ್ನು ಬಂಧಿಸಲಾಗಿದ್ದು ಈಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಡ್ಯಾನ್ಸ್ ಕೊರಿಯೋಗ್ರಫರ್ ಆಗಿದ್ದ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ. ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಈಗ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಗೆ ಭೇಟಿ ನೀಡಿ ಕೃತ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಡಿಸಿಪಿ ಸಾರಾ ಫಾತೀಮಾ ಅವರು ಆಯುಕ್ತರಿಗೆ ಮಾಹಿತಿ ನೀಡುತ್ತಿದ್ದಾರೆ.