ವಿಚಾರಣೆಗೆ ದರ್ಶನ್‌ ಗೈರು – ಬೆಂಗಳೂರು ಕೋರ್ಟ್‌ ಅಸಮಾಧಾನ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಪ್ರಕರಣದ ಆರೋಪಿ ನಟ ದರ್ಶನ್‌ (Darshan) ಅವರು ವಿಚಾರಣೆ ಹಾಜರಾಗದಿದ್ದಕ್ಕೆ  57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಇಂದು ದರ್ಶನ್‌ ಕೋರ್ಟ್‌ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆ ಸಂದರ್ಭದಲ್ಲಿ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿದೆ. ಹೀಗಾಗಿ ವಿಚಾರಣೆಗೆ ಬರಲು ವಿನಾಯಿತಿ ಕೋರಿದರು.

ಈ ವೇಳೆ ನ್ಯಾಯಾಧೀಶರು (Judge) ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಪತಿ ವಿರುದ್ಧ ಅಕ್ರಮ ಸಂಬಂಧ ಆರೋಪ – ಪತ್ನಿ ನೇಣಿಗೆ ಶರಣು

ವಿಚಾರಣೆ ವೇಳೆ ದರ್ಶನ್‌ ಪರ ವಕೀಲರು, ದರ್ಶನ್‌ ಮನೆಯಿಂದ ಜಪ್ತಿ ಮಾಡಿಕೊಂಡಿದ್ದ 75 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್‌, ಆದಾಯ ತೆರಿಗೆ ಇಲಾಖೆ ವಾದ ಮಂಡಿಸಿದ ಬಳಿಕ ಆದೇಶ ನೀಡುವುದಾಗಿ ಹೇಳಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. ಈ ವೇಳೆ ತನಿಖೆ ವೇಳೆ ಜಪ್ತಿ ಮಾಡಿದ್ದ ಮೊಬೈಲ್‌ಗಳ ಹಿಂತಿರುಗಿಸಲು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದರು. ಇದನ್ನೂ ಓದಿ: ಕೃಷಿಹೊಂಡದಲ್ಲಿ ಮುಳುಗಿ ಅಕ್ಕ, ತಂಗಿಯ ದಾರುಣ ಸಾವು

ಇಂದಿನ ವಿಚಾರಣೆಗೆ ಪವಿತ್ರಾ ಗೌಡ ಮತ್ತು ಉಳಿದ ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದರು. ಸಹೋದರನ ಜೊತೆ ಪವಿತ್ರಾ ಗೌಡ ಆರ್ ಆರ್ ನಗರದ ಮನೆಯಿಂದ ಕೋರ್ಟ್‌ಗೆ ಆಗಮಿಸಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು (Bail) ಸಿಕ್ಕಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ (Court) ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಆರೋಪಿಗಳು ಕೋರ್ಟ್​ಗೆ ಹಾಜರಾಗಿದ್ದರು.