ಬೆಂಗಳೂರು: ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿತ್ತು. ಇಬ್ಬರು ಗೆಳೆಯರನ್ನು ಸನ್ಮಾನ ಮಾಡುವುದರ ಜೊತೆಗೆ ಇಬ್ಬರಿಗೂ ಬಿರುದನ್ನು ನೀಡಿದ್ದಾರೆ.
63ನೇ ಕನ್ನಡ ರಾಜ್ಯೋತ್ಸವದಂದು ಗೆಳೆಯರಾದ ದರ್ಶನ್ ಹಾಗೂ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ. ಈ ವೇಳೆ ದರ್ಶನ್ ಅವರಿಗೆ ‘ಕರುನಾಡ ಕಲಾಕುಲತಿಲಕ’ ಬಿರುದು ನೀಡಿದರೆ, ಸೃಜನ್ ಅವರಿಗೆ ‘ಅಭಿನಯ ರತ್ನ’ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು.

ಕತಾರ್ ದೇಶದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಆ ದೇಶದ ಕನ್ನಡ ಸಂಘವೊಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗವಹಿಸಿದ್ದರು.
ಅಲ್ಲಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಹಾಗೂ ಸೃಜನ್ ಅವರನ್ನು ಅಲ್ಲಿನ ಸಂಘ ಗೌರವಿಸಿದೆ. ಕತಾರ್ ನಲ್ಲಿದ್ದ ಕನ್ನಡಿಗರು ತಮ್ಮ ನೆಚ್ಚಿನ ನಟ ದರ್ಶನ್ ಹಾಗೂ ಸೃಜನ್ ಅವರನ್ನು ನೋಡಿ ಸಂತೋಷಪಟ್ಟಿದ್ದಾರೆ.
ಸದ್ಯ ದರ್ಶನ್ ಹಾಗೂ ಸೃಜನ್ ಅವರನ್ನು ಸನ್ಮಾನ ಮಾಡುತ್ತಿರುವ ಫೋಟೋವನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಸನ್ಮಾನ ಮಾಡಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply