ಬೆಂಗಳೂರು: ನಟ ದರ್ಶನ್‌ಗೆ (Darshan) ಜೈಲಿನಲ್ಲಿ ಕನಿಷ್ಠ ಸೌಲಭ್ಯ ನೀಡಿಲ್ಲ ಅಂತಾ ಆರೋಪಿಸಿ ದರ್ಶನ್ ಪರ ವಕೀಲರು ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ರು. ಕಳೆದ ಎರಡೂವರೆ ತಿಂಗಳಿನಿಂದ ವಾದ ಪ್ರತಿವಾದ ಅಲಿಸಿದ್ದ ಕೋರ್ಟ್, ದರ್ಶನ್ ಗೆ ಜೈಲಿನ ಮ್ಯಾನ್ಯುಯಲ್ (Jail Manual) ಪ್ರಕಾರ ಕನಿಷ್ಠ ಸೌಲಭ್ಯ ನೀಡುವಂತೆ ಸೂಚಿಸಿತ್ತು. ಇಂದು ಈ ಸಂಬಂಧ ಅದೇಶ ನೀಡಿದ್ದು, ದರ್ಶನ್‌ಗೆ ಮ್ಯಾನ್ಯುಯಲ್ ಪ್ರಕಾರ ಸೌಲಭ್ಯ ನೀಡಿಕೆಗೆ ಸೂಚನೆ ನೀಡಿದೆ.
ತಿಂಗಳಿಗೆ ಒಂದು ಸಾರಿ ಹೊಸ ಕಂಬಳಿ ನೀಡುವಂತೆ ಸೂಚಿಸಿ ಇದೇ 31 ರಂದು ಚಾರ್ಜಸ್‌ಫ್ರೇಮ್ ಮಾಡೋದಾಗಿ ಸೂಚಿಸಿದೆ. ಇದೇ ವೇಳೆ ಮಾತಾಡಿದ ದರ್ಶನ್ ಪರ ವಕೀಲ ಸುನೀಲ್, ಇದು ಬರೇ ಹಾಸಿಗೆ ತಲೆ ದಿಂಬು ವಿಚಾರ ಅಲ್ಲ. ಜೈಲಿನಲ್ಲಿ ಕನಿಷ್ಠ ಸೌಲಭ್ಯ ನೀಡಬೇಕು ಅಂತಾ ಕೋರ್ಟ್ ಅದೇಶ ನೀಡಿತ್ತು. ಆದರೆ ಜೈಲು ಅಧಿಕಾರಿಗಳು ಅದೇಶ ಉಲ್ಲಂಘನೆ ಮಾಡಿದ್ರು. ಹಾಗಾಗಿ ಕೋರ್ಟ್ ಇವತ್ತು ಜೈಲು ಅಧಿಕಾರಿಗಳಿಗೆ ಛೀಮಾರಿ ಹಾಕಿದೆ ಅಂತ ತಿಳಿಸಿದ್ರು. ಇದನ್ನೂ ಓದಿ: ಏರ್ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ
ಜೈಲು ಮ್ಯಾನ್ಯುಯಲ್ ಫಾಲೋ ಮಾಡಿ, ಕನಿಷ್ಠ ಸೌಲಭ್ಯ ನೀಡಿ ಅಂತಾ ಆದೇಶ ನೀಡಿದೆ. ದರ್ಶನ್‌ಗೆ ಹಳೇ ಚಾದರ್ ನೀಡಲಾಗಿದೆ. ತಿಂಗಳಿಗೆ ಒಮ್ಮೆ ಅದನ್ನು ಬದಲಾವಣೆ ಮಾಡಿ ಅಂತಾ ಹೇಳಿದೆ ಎಂದರು.
ಇನ್ನೂ ಸರ್ಕಾರಿ ಪರ ವಕೀಲರು, ಟ್ರಯಲ್ ತಡ ಮಾಡ್ತಿದ್ದಾರೆ ಅಂತಾ ಆರೋಪ ಮಾಡಿದ್ರು. ಇದು ಸತ್ಯಕ್ಕೆ ದೂರವಾದ ವಿಚಾರ, ಸುಪ್ರೀಂ ಕೋರ್ಟ್ ಅದಷ್ಟು ಬೇಗ ಟ್ರಯಲ್ ಶುರು ಮಾಡಿ ಅಂತಾ ಹೇಳಿದೆ. ಹೊರತುಪಡಿಸಿ, ಇಷ್ಟೇ ದಿನದಲ್ಲಿ ಟ್ರಯಲ್ ಮಾಡಿ ಅಂತಾ ಹೇಳಿಲ್ಲ ಅಂತ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು
